ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಗಳನ್ನು ರಕ್ಷಿಸುತ್ತಿದೆ: ಪ್ರಿಯಾಂಕಾ ಗಾಂಧಿ

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಗಳನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

Published: 30th September 2019 02:03 PM  |   Last Updated: 30th September 2019 02:03 PM   |  A+A-


Priyanka Gandhi

ಪ್ರಿಯಾಂಕಾ ಗಾಂಧಿ

Posted By : Shilpa D
Source : PTI

ನವದೆಹಲಿ: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಗಳನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ಕಾನೂನು ವಿದ್ಯಾರ್ಥಿನಿಗೆ ಬೆಂಬಲ ನೀಡಿ ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿಯನ್ನು ತಡೆಯುವ ಮೂಲಕ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಪ್ರಿಯಾಂಕಾ ದೂರಿದ್ದಾರೆ.

ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದ ಶಹಜಹಾನಪುರವನ್ನು ಸುತ್ತಲೂ ಬ್ಲಾಕ್  ಮಾಡಿ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಅವರನ್ನು ವಶಕ್ಕೆ ಪಡೆಯಲಾಗಿದೆ, 

ಬಂಧಿತ ಕಾನೂನು ವಿದ್ಯಾರ್ಥಿನಿ ಬೆಂಬಲಿಸಿ  ಸೋಮವಾರ ನ್ಯಾಯ ಯಾತ್ರೆ ಹಮ್ಮಿಕೊಳ್ಳಲು ಕಾಂಗ್ರೆಸ್ ಮುಖಂಡರಾದ ಜಿತಿನ್ ಪ್ರಸಾದ್ ಮತ್ತು ಕೌಶಲ್ ಮಿಶ್ರಾ ನಿರ್ಧರಿಸಿದ್ದರು. ಆದರೆ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಹೇಳಲಾಗಿದೆ.

ಬೆಳಗ್ಗೆ 10 ಗಂಟೆ ವೇಳೆಗೆ ನನ್ನ ಮನೆಗೆ ಪೊಲೀಸರನ್ನು ನಿಯೋಜಿಸಲಾಗಿತ್ತ, ಉತ್ತರ ಪ್ರದೇಶ ಕಾಶ್ಮೀರವಲ್ಲ, ಸಂತ್ರಸ್ತೆ ಪರವಾಗಿ ನಡೆಯಬೇಕಿದ್ದ ಪ್ರತಿಭಟನಾ ರ್ಯಾಲಿಯನ್ನು ತಡೆಗಟ್ಟಿ ನಮ್ಮ ಮೂಲಭೂತ ಸ್ವಾತಂತ್ರ್ಯ ಹತ್ತಿಕ್ಕುತ್ತಿದ್ದ ಎಂದು ದೂರಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp