ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಭಾರತದಲ್ಲಿ ಮುಂದುವರೆದ ಮಹಾಮಾರಿ 'ಕೊರೋನಾ' ಆರ್ಭಟ: 'ಮಹಾ'ದಲ್ಲಿ ವ್ಯಕ್ತಿ ಬಲಿ, ಸಾವಿನ ಸಂಖ್ಯೆ 51ಕ್ಕೆ ಏರಿಕೆ, 1,703 ಮಂದಿಯಲ್ಲಿ ಸೋಂಕು ಪತ್ತೆ

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಮಹಾರಾಷ್ಟ್ರ ರಾಜ್ಯದಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ, ಇದರಂತೆ ದೇಶದಲ್ಲಿ ವೈರಸ್'ಗೆ ಬಲಿಯಾದವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. 

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಮಹಾರಾಷ್ಟ್ರ ರಾಜ್ಯದಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ, ಇದರಂತೆ ದೇಶದಲ್ಲಿ ವೈರಸ್'ಗೆ ಬಲಿಯಾದವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. 

ಮಾರ್ಚ್ 28 ರಂದು ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಪಲ್ಘರ್ ಜಿಲ್ಲೆಯ ಆಸ್ಪತ್ರೆಯಲ್ಲಿ 50 ವರ್ಷದ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ನಡುವೆ 18 ಮಂದಿಯಲ್ಲಿ ಮತ್ತೆ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 1,703ಕ್ಕೆ ಏರಿಕೆಯಾಗಿದೆ. 

ಜಗತ್ತಿನಾದ್ಯಂತ ಭಾರೀ ನಡುಕ ಹುಟ್ಟಿಸಿರುವ ಕೊರೋನಾ ದೇಶದ ವಿವಿಧ ಭಾಗಗಳಲ್ಲಿ ಈ ವರೆಗೂ 5 ಮಂದಿಯನ್ನು ಬಲಿಪಡೆದುಕೊಂಡಿದೆ. ಪಶ್ಚಿಮಬಂಗಾಳ, ಪಂಜಾಬ್ ಹಾಗೂ ಕೇರಳ ರಾಜ್ಯದಲ್ಲಿ ತಲಾ ಒಬ್ಬರು ಮಂಗಳವಾರ ಮೃತಪಟ್ಟಿದ್ದರು. 

ಇದೀಗ ಮಹಾರಾಷ್ಟ್ರ ರಾಜ್ಯದಲ್ಲಿ 18 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 1,619ಕ್ಕೆ ಏರಿಕೆಯಾಗಿದೆ. ಈ ನಡುವೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ 24 ಗಂಟೆಗಲಲ್ಲಿ 5 ಮಂದಿ ವೈರಸ್'ಗೆ ಬಲಿಯಾಗಿದ್ದಾರೆ. ಅಲ್ಲದೆ, 15 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಂತ ಈ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. 

ಆಂಧ್ರಪ್ರದೇಶದಲ್ಲಿ 43 ಮಂದಿಯಲ್ಲಿ ವೈರಸ್ ಪತ್ತೆ: ಸೋಂಕಿತರ ಸಂಖ್ಯೆ 87ಕ್ಕೆ ಏರಿಕೆ
ಮಾರ್ಚ್ 31ರಿಂದ ಇಂದು ಬೆಳಿಗ್ಗೆ 9 ಗಂಟೆಯವರೆಗಿನ ವರದಿಗಳ ಪ್ರಕಾರ ಆಂಧ್ರಪ್ರದೇಶ ರಾಜ್ಯದಲ್ಲಿ ಒಟ್ಟು 43 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರಂತೆ ಆಂಧ್ರಪ್ರದೇಶದಲ್ಲಿ ಈ ವರೆಗೂ ಸೋಂಕಿತರ ಸಂಖ್ಯೆ 87ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ
 

Related Stories

No stories found.

Advertisement

X
Kannada Prabha
www.kannadaprabha.com