ಕೊರೋನಾ ಮಹಾಮಾರಿಗೆ ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಬಲಿ!

ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಇಂದು ವಿಧಿವಶರಾಗಿದ್ದಾರೆ. 
ನಿರ್ಮಲ್ ಸಿಂಗ್
ನಿರ್ಮಲ್ ಸಿಂಗ್

ಚಂಡೀಗಢ: ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಇಂದು ವಿಧಿವಶರಾಗಿದ್ದಾರೆ. 

ವಿದೇಶದಿಂದ ಮರಳಿದ್ದ 62 ವರ್ಷದ ನಿರ್ಮಲ್ ಸಿಂಗ್ ಅವರು ಮಾರ್ಚ್ 30ರಂದು ಉಸಿರಾಟದ ತೊಂದರೆಯಿಂದ ಗುರು ನಾನಕ್ ದೇವ್ ಆಸ್ಪತ್ರೆಗೆ ದಾಖಲಾಗಿದ್ದರು. 

ಅವರಿಗೆ ಪರೀಕ್ಷೆ ನಡೆಸಿದಾಗ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿರುವುದು ಪತ್ತೆಯಾಗಿತ್ತು. ಕೂಡಲೇ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಿದರು ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. 

ನಿರ್ಮಲ್ ಸಿಂಗ್ ಅವರಿಗೆ ಕೇಂದ್ರ ಸರ್ಕಾರ 2009ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com