ಆಯುಷ್ಮಾನ್ ಫಲಾನುಭವಿಗಳಿಗೆ ಕೋವಿಡ್-19 ಪರೀಕ್ಷೆ, ಚಿಕಿತ್ಸೆ ಉಚಿತ! 

ಆಯುಷ್ಮಾನ್ ಫಲಾನುಭವಿಗಳಿಗೆ ಕೋವಿಡ್-19 ಪರೀಕ್ಷೆ, ಚಿಕಿತ್ಸೆ ಉಚಿತವಾಗಿ ದೊರೆಯಲಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಘೋಷಿಸಿದೆ. 
ಆಯುಷ್ಮಾನ್ ಫಲಾನುಭವಿಗಳಿಗೆ ಕೋವಿಡ್-19 ಪರೀಕ್ಷೆ, ಚಿಕಿತ್ಸೆ ಉಚಿತ!
ಆಯುಷ್ಮಾನ್ ಫಲಾನುಭವಿಗಳಿಗೆ ಕೋವಿಡ್-19 ಪರೀಕ್ಷೆ, ಚಿಕಿತ್ಸೆ ಉಚಿತ!
Updated on

ನವದೆಹಲಿ: ಆಯುಷ್ಮಾನ್ ಫಲಾನುಭವಿಗಳಿಗೆ ಕೋವಿಡ್-19 ಪರೀಕ್ಷೆ, ಚಿಕಿತ್ಸೆ ಉಚಿತವಾಗಿ ದೊರೆಯಲಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಘೋಷಿಸಿದೆ. 

ಏ.04 ರಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಧಿಕಾರ, ಖಾಸಗಿ ಪ್ರಯೋಗಾಲಯ, ಪಟ್ಟಿ ಮಾಡಿರುವ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಫಲಾನುಭವಿಗಳಿಗೆ ಉಚಿತವಾಗಿ ಕೋವಿಡ್-19 ಸೋಂಕು ಪರೀಕ್ಷೆ, ಚಿಕಿತ್ಸೆ ದೊರೆಯಲಿದೆ ಎಂದು ಹೇಳಿದೆ. 

ರಾಷ್ಟ್ರೀಯ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸುವ ಎನ್ ಹೆಚ್ಎ, ಆಯುಷ್ಮಾನ್ ಯೋಜನೆಯಡಿ ಬರುವ 50 ಕೋಟಿ ಜನರಿಗೆ ಕೋವಿಡ್-19 ಗಾಗಿ ಉಚಿತ ಪರೀಕ್ಷೆ, ಚಿಕಿತ್ಸೆ ದೊರೆಯಲಿದೆ, ಆಯುಷ್ಮಾನ್ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಸಿಗಲಿದೆ ಎಂದು ಹೇಳಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com