ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ಸಾವಿನ ಸಂಖ್ಯೆ 199ಕ್ಕೆ ಏರಿಕೆ, 6,500 ಗಡಿಯತ್ತ ಸೋಂಕಿತರ ಸಂಖ್ಯೆ

ಭಾರತದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ಸಾವಿನ ಸಂಖ್ಯೆ 199ಕ್ಕೆ ಏರಿಕೆ, 6,500 ಗಡಿಯತ್ತ ಸೋಂಕಿತರ ಸಂಖ್ಯೆ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಕಳೆದ 24 ಗಂಟೆಗಳಲ್ಲಿ 33 ಮಂದಿ ವೈರಸ್'ಗೆ ಬಲಿಯಾಗಿದ್ದು, ಇದರಂತೆ ಸಾವಿನ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 6,500 ಗಡಿಯತ್ತ ತಲುಪಿದೆ.

ಕೊರೋನಾ ವೈರಸ್ ಹತ್ತಿಕ್ಕಲು ರಾಜ್ಯ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ರಾಜ್ಯವನ್ನು ಸಂಪೂರ್ಣ ಲಾಕ್ ಡೌನ್ ಮಾಡಿದೆ. ಆದರೂ, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇರುವುದು, ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 678 ಹೊಸ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 5,709 ಪ್ರಕರಣಗಳು ಇನ್ನೂ ಆಕ್ಟೀವ್ ಆಗಿದ್ದು, 503 ಜನ ಮಾತ್ರ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 

ದೇಶದಲ್ಲಿ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೇಂದ್ರ ಸರ್ಕಾರ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ದಿನಗಳ ಕಾಲ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.