ದೇಶ

ಕೊರೋನಾಗೆ ಹೆದರಿ ವೃದ್ಧ ಆತ್ಮಹತ್ಯೆ: ಪರೀಕ್ಷಾ ವರದಿ ಬಂತು ನೆಗೆಟಿವ್!

ಕೊರೋನಾಗೆ ಹೆದರಿ ವೃದ್ಧ ಆತ್ಮಹತ್ಯೆ: ಪರೀಕ್ಷಾ ವರದಿ ಬಂತು ನೆಗೆಟಿವ್!
ವೈದ್ಯರು
Published On :

ಅರಿಯಲೂರು: ತಮಿಳುನಾಡಿನ ಅರಿಯಲೂರು ಸರ್ಕಾರಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ದಿನಗೂಲಿ ಕೂಲಿ ಕಾರ್ಮಿಕ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಅರಿಯಲೂರು ಜಿಲ್ಲೆಯ ಅರಕಟಲೈ ಗ್ರಾಮದ ನಿವಾಸಿ ಪಿ. ನಾರಾಯಣನ್ (60) ಕೇರಳದಲ್ಲಿ ದಿನಗೂಲಿ ಕಾರ್ಮಕನಾಗಿ ಕೆಲಸ ಮಾಡುತ್ತಿದ್ದು, ಮಾರ್ಚ್ 23 ರಂದು ತಮ್ಮ ಸ್ವಂತ ಊರಿಗೆ ಮರಳಿದ್ದ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಏಪ್ರಿಲ್ 6 ರಂದು ಶೀತ ಮತ್ತು ಜ್ವರದಿಂದ ಬಳಲುತ್ತಿದ್ದ ಆತ ತಾನಾಗಿಯೇ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ. ಆತನನ್ನು ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನ ಪ್ರತ್ಯೇಕ ಕೋಣೆಯಲ್ಲಿ ಇರಿಸಲಾಗಿತ್ತು. ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ತಿರುಚಿನಾಪಳ್ಳಿಯ ಮಹಾತ್ಮ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿತ್ತು.

ಆಸ್ಪತ್ರೆ ಸಿಬ್ಬಂದಿ ಕೊಣೆಯ ಬಾಗಿಲು ತೆರೆದು ನೋಡಿದಾಗ ನಾರಾಯಣನ್‍ ಟವೆಲ್‍ ನಿಂದ ಕೋಣೆಯ ಕಿಟಕಿ ಗ್ರಿಲ್‌ಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಆದರೆ, ಆತ್ಮಹತ್ಯೆ ಮಾಡಿಕೊಂಡ ಕೆಲವೇ ನಿಮಿಷಗಳಲ್ಲಿ, ಕೊರೊನಾವೈರಸ್ ಸೋಂಕಿನ ಪರೀಕ್ಷಾ ವರದಿಯಲ್ಲಿ ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಕೊವಿದ್‍-19 ಭಯದಿಂದ ಇಲ್ಲವೇ ಕೌಟುಂಬಿಕ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂಬ ಬಗ್ಗೆ ತಿಳಿದು ಬಂದಿಲ್ಲ.

ಅವರು ಆತ್ಮಹತ್ಯೆ ಮಾಡಿಕೊಂಡ ಕೆಲವೇ ನಿಮಿಷಗಳಲ್ಲಿ, ಕೊರೊನಾವೈರಸ್ ಅವರ ಪರೀಕ್ಷಾ ಫಲಿತಾಂಶಗಳು .ಣಾತ್ಮಕವಾಗಿವೆ. ಅವರು COVID-19 ಭಯದಿಂದ ಅಥವಾ ಕುಟುಂಬ ವಿವಾದದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ತಿಳಿದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.