ಮಹಾರಾಷ್ಟ್ರ: ಧಾರಾವಿಯಲ್ಲಿ ಮತ್ತೆ 4 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ, ಒಂದು ಸಾವು, ಸೋಂಕಿತರ ಸಂಖ್ಯೆ 1982ಕ್ಕೆ ಏರಿಕೆ

ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಧಾರಾವಿ ಸ್ಲಂ ನಲ್ಲಿ ಮತ್ತೆ 4 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಂತೆಯೇ ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಧಾರಾವಿ ಸ್ಲಂ
ಧಾರಾವಿ ಸ್ಲಂ

ಮುಂಬೈ: ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಧಾರಾವಿ ಸ್ಲಂ ನಲ್ಲಿ ಮತ್ತೆ 4 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಂತೆಯೇ ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ದೇಶದ ಅತೀ ದೊಡ್ಡ ಕೊಳಚೆ ಪ್ರದೇಶವೆಂದೇ ಖ್ಯಾತಿ ಪಡೆದಿರುವ ಮುಂಬೈನ ಧಾರಾವಿಯಲ್ಲಿ ಅಕ್ಷರಶಃ ಕೊರೋನಾ ವೈರಸ್ ತನ್ನ ರುದ್ರನರ್ತನ ಮಾಡುತ್ತಿದ್ದು, ನಿನ್ನೆಯಷ್ಚೇ ಇಲ್ಲಿ 15 ಹೊಸ ಪ್ರಕರಣಗಳು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇಂದು ಮತ್ತೆ 4 ಹೊಸ ವೈರಸ್ ಸೋಂಕು  ಪ್ರಕರಣಗಳು ದಾಖಲಾಗಿದ್ದು, ಓರ್ವ ಸೋಂಕು ಪೀಡಿತ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಧಾರಾವಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದ್ದು, ವೈರಸ್ ನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಇನ್ನು ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1985ಕ್ಕೆ ಏರಿಕೆಯಾಗಿದ್ದು, ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 149ಕ್ಕೆ ಏರಿಕೆಯಾಗಿದೆ. ನಿನ್ನೆ ಬಿಎಂಸಿ ವ್ಯಾಪ್ತಿಯ ಲಾಲ್ ಭಾಗ್ ಪ್ರದೇಶದಲ್ಲಿರುವ ಗಣೇಶ್ ಗಲ್ಲಿಯಲ್ಲಿ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ  ಕಂಟೈನ್ ಮೆಂಟ್ ಪ್ರದೇಶ (ಸೋಂಕು ಪೀಡಿತ ಪ್ರದೇಶ) ಎಂದು ಘೋಷಣೆ ಮಾಡಿ ಸೀಲ್ ಡೌನ್ ಮಾಡಲಾಗಿತ್ತು.

ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಬಿಗಿ ಗೊಳಿಸಲಾಗಿದ್ದು, ರಸ್ತೆಗಳಿಗೆಲ್ಲಾ ಬ್ಯಾರಿಕೇಡ್ ಹಾಕಿರುವ ಪೊಲೀಸರು, ಅನಾವಶ್ಯಕವಾಗಿ ರಸ್ತೆಗಳಲ್ಲಿ ಸಂಚರಿಸುತ್ತಿರುವವರ ವಿರುದ್ಧ ಪ್ರಕಕರಣ ದಾಖಲಿಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಈ ವರೆಗೂ ಪೊಲೀಸರು ಲಾಕ್ ಡೌನ್ ನಿಯಮ ಉಲ್ಲಂಘನೆ  ಮಾಡಿದ್ದಕ್ಕಾಗಿ 35 ಸಾವಿರಕ್ಕೂ ಅಧಿಕ ಕೇಸ್ ಗಳನ್ನು ದಾಖಲಿಸಿದ್ದು, ಈ ಪೈಕಿ ಪೊಲೀಸರ ಮೇಲೆ ಹಲ್ಲೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ 70 ಪ್ರಕರಣಗಳು ದಾಖಲಾಗಿವೆ. ಅಂತೆಯೇ 161 ಮಂದಿಯನ್ನು ಪೊಲೀಸರು ಬಂಧಿಸಿದ್ದು, 475 ಮಂದಿಯ ವಿರುದ್ಧ ಲಾಕ್ ಡೌನ್ ನಿಯಮ  ಉಲ್ಲಂಘಿಸಿದ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಪೊಲೀಸರು 2,525 ಮಂದಿಯನ್ನು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com