ಲಾಕ್'ಡೌನ್'ಗಿಂದು ಕೊನೇ ದಿನ: ದೇಶವನ್ನುದ್ದೇಶಿಸಿ ಇಂದು ಪ್ರಧಾನಿ ಭಾಷಣ, ಹೆಚ್ಚಿದ ಕುತೂಹಲ

ಮಹಾಮಾರಿ ಕೊರೋನಾ ವೈರಸ್ ನಿಗ್ರಹಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 24 ರಂದು ಘೋಷಣೆ ಮಾಡಿದ್ದ ಸುದೀರ್ಘ 21 ದಿನಗಳ ಭಾರತ ಲಾಕ್ ಡೌನ್ ಮಂಗಳವಾರ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮೋದಿಯವರು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ನಿಗ್ರಹಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 24 ರಂದು ಘೋಷಣೆ ಮಾಡಿದ್ದ ಸುದೀರ್ಘ 21 ದಿನಗಳ ಭಾರತ ಲಾಕ್ ಡೌನ್ ಮಂಗಳವಾರ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮೋದಿಯವರು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. 

ಮೋದಿಯವರು ಭಾಷಣ ಮಾಡುತ್ತಿರುವ ಹಿನ್ನೆಲೆಯಲ್ಲಿ ದೇಶದ ಜನತೆಯಲ್ಲಿ ಸಾಕಷ್ಟು ಕುತೂಹಲಗಳಿದ್ದು, ಯಾವೆಲ್ಲಾ ಘೋಷಣೆಗಳನ್ನು ಮಾಡಬಹುದೆಂಬುದರ ಬಗ್ಗೆ ಈಗಲೇ ಚಿಂತನೆಗಳನ್ನು ನಡೆಸಲು ಆರಂಭಿಸಿದ್ದಾರೆ. 

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10 ಸಾವಿರ ಗಡಿಗೆ ತಲುಪಿದೆ. ಸಾವಿನ ಸಂಖ್ಯೆ 400ರ ಗಡಿಯತ್ತ ಹೋಗುತ್ತಿದೆ. ಈ ನಡುವೆ ಎಲ್ಲಾ ರಾಜ್ಯ ಸರ್ಕಾರಗಳು ಲಾಕ್'ಡೌನ್ ಅನ್ನು ಇನ್ನೂ ಎರಡು ವಾರ ವಿಸ್ತರಿಸಬೇಕು ಎಂದು ಒಕ್ಕೊರಲ ಮನವಿ ಮಾಡಿದೆ. ಇದಕ್ಕೆ ಪುಷ್ಟಿ ನೀಡುವಂತೆ ಜೀವ ಇದ್ದರೆ ಜೀವನ ಎಂದು ಲಾಕ್'ಡೌನ್ ವೇಳೆ ಘೋಷಿಸಿದ್ದ ಮೋದಿಯವರು ಮುಖ್ಯಮಂತ್ರಿಗಳ ಸಭೆ ವೇಳೆ ಜೀವ ಉಳಿಯಬೇಗು, ಜೀವನವೂ ಇರಬೇಕು ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com