ದೆಹಲಿಯಲ್ಲಿ ಪ್ರಧಾನಿ ಮೋದಿಯವರ ಲಾಕ್'ಡೌನ್ ಕ್ರಮ ಪೂರ್ಣ ಪ್ರಮಾಣದಲ್ಲಿ ಜಾರಿ- ಕೇಜ್ರಿವಾಲ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಾಕ್'ಡೌನ್ ವಿಸ್ತರಣೆ ಆದೇಶವನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.
ಕೇಜ್ರಿವಾಲ್
ಕೇಜ್ರಿವಾಲ್
Updated on: 

ನವದೆಹಲಿ; ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಾಕ್'ಡೌನ್ ವಿಸ್ತರಣೆ ಆದೇಶವನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ. 

ಮಹಾಮಾರಿ ಕೊರೋನಾ ವೈರಸ್ ನಿಗ್ರಹಕ್ಕಾಗಿ ಮಾರ್ಚ್ 24 ರಂದು ಘೋಷಣೆ ಮಾಡಿದ್ದ ಸುದೀರ್ಘ 21 ದಿನಗಳ ಭಾರತ ಲಾಕ್ ಡೌನ್ ಮಂಗಳವಾರ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಂದು ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಮತ್ತೆ ಮೇ.3ರವರೆಗೆ ಲಾಕ್'ಡೌನ್ ವಿಸ್ತರಣೆ ಮಾಡಿದರು. 

ಮೋದಿಯವರು ಆದೇಶ ಹೊರಡಿಸುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್ ಅವರು, ಪ್ರಧಾನಮಂತ್ರಿಗಳ ಲಾಕ್'ಡೌನ್ ಕ್ರಮವನ್ನು ದೆಹಲಿಯಲ್ಲಿ  ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com