ಗುಜರಾತ್ ಶಾಸಕನಿಗೆ ಕೊರೋನಾ ಪಾಸಿಟಿವ್, ಸ್ವಯಂ-ಕ್ವಾರಂಟೈನ್ ಗೆ ಒಳಗಾದ ಸಿಎಂ ರೂಪಾನಿ

ಗುಜರಾತ್ ಕಾಂಗ್ರೆಸ್ ಶಾಸಕರೊಬ್ಬರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅವರ ಸಂಪರ್ಕದಲ್ಲಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಸ್ವಯ-ಕ್ವಾರಂಟೈನ್ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.
ವಿಜಯ್ ರೂಪಾನಿ
ವಿಜಯ್ ರೂಪಾನಿ
Updated on: 

ಗಾಂಧಿನಗರ: ಗುಜರಾತ್ ಕಾಂಗ್ರೆಸ್ ಶಾಸಕರೊಬ್ಬರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅವರ ಸಂಪರ್ಕದಲ್ಲಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಸ್ವಯ-ಕ್ವಾರಂಟೈನ್ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.

ಸಿಎಂ ರೂಪಾನಿ ಅವರು ಆರೋಗ್ಯವಾಗಿದ್ದು, ಅವರು ವಿಡಿಯೋ ಕಾಲ್, ವಿಡಿಯೋ ಕಾನ್ಫೆರೆನ್ಸ್ ಮತ್ತು ದೂರವಾಣಿ ಮೂಲಕ ಆಡಳಿತ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಕಾರ್ಯದರ್ಶಿ ಅಶ್ವನಿ ಕುಮಾರ್ ಅವರು ತಿಳಿಸಿದ್ದಾರೆ.

ಮುಂದಿನ ಒಂದು ವಾರಗಳ ಕಾಲ ಯಾರಿಗೂ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡುವುದಕ್ಕೆ ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ಶಾಸಕ ಮನೆಯಲ್ಲಿಯೇ ಇರುವುದು ಬಿಟ್ಟು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು ದೊಡ್ಡ ತಪ್ಪು ಎಂದಿದ್ದಾರೆ.

ನಿನ್ನೆ ಬೆಳಗ್ಗೆ ಪಕ್ಷದ ಶಾಸಕರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ಕಾಂಗ್ರೆಸ್ ಶಾಸಕ ಇಮ್ರಾನ್ ಖೆಡವಾಲಾ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com