ದೇಶ

ದೇಶದಲ್ಲಿ ಕೊರೋನಾ ರುದ್ರತಾಂಡವ: 12,000 ಗಡಿಯತ್ತ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ 392ಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ರುದ್ರತಾಂಡವ: 12,000 ಗಡಿಯತ್ತ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ 392ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ಕೊರೋನಾ ತಡೆಗೆ ಸರ್ಕಾರ ನಾನಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆಯಾದರೂ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿಲ್ಲ. ಬುಧವಾರ ಒಂದೇ ದಿನ ದೇಶದಾದ್ಯಂತ 1,120 ಜನರಿಗೆ ವೈರಸ್ ತಗುಲಿದ್ದು, ಈ ಮೂಲಕ ಸತತ ಎರಡನೇ ದಿನವೂ ಹೊಸ ಸೋಂಕು ಪತ್ತೆಯಾದ ಪ್ರಕರಣಗಳ ಸಂಖ್ಯೆ 1000ಗಡಿ ದಾಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,933ಕ್ಕೇರಿದೆ. 

ಇನ್ನು ಬುಧವಾರ 36 ಮಂದಿ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 392ಕ್ಕೆ ತಲುಪಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಬುಧವಾರ 1344 ಹೊಸ ಪ್ರಕರಣ ಬೆಳಕಿಗೆ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 11,933ಕ್ಕೆ ತಲುಪಿದೆ ಎಂದು ಹೇಳಿದೆ, ಅಲ್ಲದೆ, ಸಾವಿನ ಸಂಖ್ಯೆ 393ಕ್ಕೆ ಏರಿದೆ. ಇನ್ನು 1,343 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,197 ಇದೆ ಎಂದು ಸರ್ಕಾರ ತಿಳಿಸಿದೆ. 

ಬುಧವಾರ ಮಹಾರಾಷ್ಟ್ರ 232, ಮಧ್ಯಪ್ರದೇಶದಲ್ಲಿ 1978, ಗುಜರಾತ್'ನಲ್ಲಿ 114, ಉತ್ತರಪ್ರದೇಶದಲ್ಲಿ 75, ತಮಿಳುನಾಡಿನಲ್ಲಿ 38, ರಾಜಸ್ತಾನದಲ್ಲಿ 41 ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ. 

ದೇಶದಲ್ಲಿ ಕೊರೋನಾ ಪ್ರಕರಣಗಲು 11 ಸಾವಿರ ಗಡಿ ದಾಟಿದ್ದು, 380ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಪೈಕಿ ಅರ್ಧಕ್ಕಿಂತ ಹೆಚ್ಚು ಸಾವಿನ ಪ್ರಕರಣ ಮುಂಬೈ, ಪುಣೆ, ದೆಹಲಿ, ಇಂದೋರ್ ಈ ನಗರಗಳಲ್ಲೇ ಸಂಭವಿಸಿದೆ. ಮುಂಬೈನಲ್ಲಿ 112, ಪುಣೆಯಲ್ಲಿ 35, ಇಂದೋರ್ ನಲ್ಲಿ 37 ಮತ್ತು ದೆಹಲಿಯಲ್ಲಿ 30 ಜನ ಸಾವನ್ನಪ್ಪಿದ್ದಾರೆ. ಈ 4 ನಗರಗಳಲ್ಲಿ 214 ಮಂದಿ ಸಾವಿಗೀಡಾಗಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.