ದೆಹಲಿ: ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರಲ್ಲೂ ವೈರಸ್ ಪಾಸಿಟಿವ್

ದೆಹಲಿಯ ವೈದ್ಯಕೀಯ ಆಸ್ಪತ್ರೆಯೊಂದರಲ್ಲಿ ತುರ್ತುನಿಗಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಗುರುವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದೆಹಲಿಯ ವೈದ್ಯಕೀಯ ಆಸ್ಪತ್ರೆಯೊಂದರಲ್ಲಿ ತುರ್ತುನಿಗಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಗುರುವಾರ ತಿಳಿದುಬಂದಿದೆ. 

ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಅರವಳಿಕೆ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರಲ್ಲಿ ವೈರಸ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೊರೋನಾ ಸೋಂಕಿತರಿಕೆ ಚಿಕಿತ್ಸೆ ನೀಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ದೆಹಲಿಯ ಹಲವು ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ವೈರಸ್ ಪತ್ತೆಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಇದೊಂದು ಆತಂಕಕಾರಿ ಬೆಳವಣಿಗೆ ಎಂದು ಹೇಳಲಾಗುತ್ತಿದೆ. 

ಈ ನಡುವೆ ದೆಹಲಿಯಲ್ಲಿ ಈ ವರೆಗೂ 1561 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 30 ಮಂದಿ ಸಾವಿಗೀಡಾಗಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com