ದೇಶ

ಮಹಾರಾಷ್ಟ್ರ ಈಗ ದೇಶದ ಕೊರೋನ ರಾಜಧಾನಿ, 187 ಸಾವು, 3081ಕ್ಕೇರಿದ ಸೋಂಕಿತರ ಸಂಖ್ಯೆ

ಮಹಾರಾಷ್ಟ್ರ ಈಗ ದೇಶದ ಕೊರೋನ ರಾಜಧಾನಿ, 187 ಸಾವು, 3081ಕ್ಕೇರಿದ ಸೋಂಕಿತರ ಸಂಖ್ಯೆ
ಸಂಗ್ರಹ ಚಿತ್ರ
Published On :

ಮುಂಬೈ: ಮಹಾರಾಷ್ಟ್ರದಲ್ಲಿ ದೇಶದಲ್ಲೆ ಅತಿ ಹೆಚ್ಚು 2,916 ಕರೋನ ಸೋಂಕು ಪ್ರಕರಣ ವರದಿಯಾಗಿದ್ದು ಈವರೆಗೆ 187 ಜನರು ಮೃತಪಟ್ಟಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3 ಸಾವಿರ ಗಡಿ ದಾಟಿದ್ದು, 3081ಕ್ಕೆರಿದೆ.

ಈ ಕುರಿತಂತೆ ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ 165 ಮಂದಿ ಸೋಂಕಿತರ ಪೈಕಿ 107 ಪ್ರಕರಣಗಳು ಮುಂಬೈನಲ್ಲೇ ಪತ್ತೆಯಾಗಿರುವುದು ಇನ್ನಷ್ಟು ತಲ್ಲಣಕ್ಕೆಕಾರಣವಾಗಿದೆ. ಇಂದು ಒಂದೇ ದಿನದಲ್ಲಿ ಮಹಾರಾಷ್ಟ್ರದಲ್ಲಿ 165 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3081ಕ್ಕೆರಿದೆ. ದೇಶದ ಆರ್ಥಿಕ ರಾಜಧಾನಿ ಮುಂಬೈ ಈಗ ಕೊರೋನ ರಾಜಧಾನಿಯಾಗಿದ್ದು, ಮುಂಬೈ ಮಹಾನಗರಿಯೊಂದರಲ್ಲೇ ಇಂದು 107 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಪುಣೆಯಲ್ಲಿ 19, ಥಾಣೆಯಲ್ಲಿ 13 ಮತ್ತು ನಾಗಪುರದಲ್ಲಿ 11 ಪ್ರಕರಣಗಳು ವರದಿಯಾಗಿವೆ. ಇನ್ನು ಧಾರಾವಿಯೊಂದರಲ್ಲೇ 11 ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಇಲ್ಲಿ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.

ಪಿಂಪ್ರಿ-ಚಿಂಚ್‌ವಾಡ್ (ಪುಣೆ) ಮತ್ತು ಮಾಲೆಗಾಂವ್ (ನಾಸಿಕ್) ದಿಂದ ತಲಾ ನಾಲ್ಕು, ನವೀ ಮುಂಬೈ ಮತ್ತು ವಸೈ-ವಿರಾರ್ (ಪಾಲ್ಘರ್) ದಿಂದ ತಲಾ ಎರಡು, ಮತ್ತು ಅಹ್ಮದ್‌ನಗರ, ಚಂದ್ರಾಪುರ ಮತ್ತು ಪನ್ವೆಲ್ (ರಾಯಗಡ್) ದಿಂದ ತಲಾ ಒಂದು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರ ಬಳಿಕ ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ದೆಹಲಿ 2ನೇ ಸ್ಥಾನದಲ್ಲಿದ್ದು, ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 1,578ಕ್ಕೆ ಏರಿಕೆಯಾಗಿದೆ. ಇನ್ನು ತಮಿಳುನಾಡಿನಲ್ಲಿ 1,242 ಪ್ರಕರಣದ ಮೂಲಕ ಮೂರನೇ ಸ್ಥಾನದಲ್ಲಿದೆ. ದೇಶದಲ್ಲಿ ಗುರುವಾರ ಒಟ್ಟು ಪ್ರಕರಣಗಳ ಸಂಖ್ಯೆ 12,000 ದಾಟಿದ್ದರೆ, ಸಾವಿನ ಸಂಖ್ಯೆ 414 ಕ್ಕೆ ಏರಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 165 ಮಂದಿಯಲ್ಲಿ ಕೊರೋನ ಸೋಂಕು ದೃಡಪಟ್ಟಿದೆ. 

ಮಹಾರಾಷ್ಟ್ರದ್ಯಂತ ಸೋಂಕು ನಿಯಂತ್ರಿಸಲು ಕಠಿಣ ಲಾಕ್ ಡೌನ್ ಕ್ರಮ ಕೈಗೊಳ್ಳಲಾಗಿದೆ. ಆದರೂ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಲಾಕ್ ಡೌನ್ ನಡುವೆ ಜನತೆಯನ್ನು ನಿಯಂತ್ರಿಸುವುದು ಅಲ್ಲಿನ ಸರ್ಕಾರಕ್ಕೆ ಬಹಳ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ನಡುವೆ , ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಗೂ ಸಹ ಮಾರಣಾಂತಿಕ ಸೋಂಕು ತಗುಲಿದ್ದು, ಹಲವು ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಲಾಗಿದೆ. ಇನ್ನು ಸೋಂಕಿತರ ಸಂಪರ್ಕದಲ್ಲಿದ್ದ ನೂರಾರು ಮಂದಿಯನ್ನು ಕ್ವಾರಂಟೈನ್ ನಲ್ಲಿಡಲಾಗಿದೆ. 
ರೈಲು ಸೇವೆಗಳ ಪುನರಾರಂಭದ ಬಗ್ಗೆ ತಪ್ಪು ಮಾಹಿತಿ ಹಬ್ಬಿಸಿ ಬಿಕ್ಕಟ್ಟನ್ನು ಹೆಚ್ಚಿಸಿದ ಜನರಿಗೆ ಕಠಿಣ ಎಚ್ಚರಿಕೆ ನೀಡಿರುವ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ರೈಲು ಸೇವೆಗಳನ್ನು ಪ್ರಾರಂಭಿಸುವ ಬಗ್ಗೆ ತಪ್ಪು ಮಾಹಿತಿ ಹಬ್ಬಿಸಿದ ಕಿಡಿಗೇಡಿಗಳನ್ನು ಪತ್ತೆಹಚ್ಚಲಾಗಿದೆ ಎಂದು  ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಗುರುವಾರ ಪ್ರಕರಣಗಳ ಸಂಖ್ಯೆ 12,000 ದಾಟಿದ್ದರೆ, ಸಾವಿನ ಸಂಖ್ಯೆ 414 ಕ್ಕೆ ಏರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.