ಕೋವಿಡ್-19: ಮಹತ್ವದ ಪ್ರಗತಿ ಸಾಧಿಸಿದ ಗುಜರಾತ್ ವಿಜ್ಞಾನಿಗಳು!

ಅಹಮದಾಬಾದ್: ಕೊರೋನಾ ವೈರಸ್ ಗೆ ಮದ್ದು ಕಂಡುಹಿಡಿಯುವ ನಿಟ್ಟಿನಲ್ಲಿ ಗುಜರಾತ್ ನ ವಿಜ್ಞಾನಿಗಳು ಮಹತ್ವದ ಪ್ರಗತಿ ಸಾಧಿಸಿದ್ದಾರೆ.
ಕೋವಿಡ್-19 ಗೆ ಕಾರಣವಾಗಿರುವ ವೈರಾಣುವಿನ ಜಿನೋಮ್ ಸೀಕ್ವೆನ್ಸ್ ನ್ನು ಡಿಕೋಡ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜೀನೋಮ್ ಎಂದರೆ ವಂಶವಾಹಿಗಳ ಗುಚ್ಛ. ಇದು ವೈರಾಣುಗಳ ನಿರ್ದಿಷ್ಟ ಗುಣಲಕ್ಷಣಗಳನ್ನು ನಿರ್ಧರಿಸುತ್ತದೆ. ಜೀನೋಮ್ ಸೀಕ್ವೆನ್ಸ್ ಅಥವಾ ವಂಶವಾಹಿಳ ಗುಚ್ಛದ ಅನುಕ್ರಮವನ್ನು ಡಿಕೋಡ್ ಮಾಡುವುದರಿಂದ ವೈರಾಣುವಿನ ಮೂಲವನ್ನು ತಿಳಿದು ಸೂಕ್ತ ಚಿಕಿತ್ಸಾ ವಿಧಾನಕ್ಕೆ ಸಹಕಾರಿಯಾಗಲಿದೆ.
ಮೊದಲ ಬಾರಿಗೆ ಭಾರತದಲ್ಲಿ ಗುಜರಾತ್ ನ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರ (ಜಿಬಿಆರ್ ಸಿ) ದ ವಿಜ್ಞಾನಿಗಳು ಜೀನೋಮ್ ಸೀಕ್ವೆನ್ಸ್ ಡಿಕೋಡ್ ಮಾಡುವಲ್ಲಿ ಯಶಸ್ವಿಯಾಗಿದ್ದು, ಗುಜರಾತ್ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮೂಲಕ ವಿಜ್ಞಾನಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಜೀನೋಮ್ ಸೀಕ್ವೆನ್ಸ್ ವೈರಸ್ ನ ಮೂಲ, ಔಷಧಗಳ ಟಾರ್ಗೆಟ್ ಹಾಗೂ ಚುಚ್ಚುಮದ್ದುಗಳನ್ನು ನೀಡುವುದರಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೆಚ್ಚುಗೆ ವ್ಯಕ್ತಪಡಿಸಿದೆ.
ಈಗಾಗಲೇ ಐಸಿಎಂಆರ್ ನಲ್ಲಿನ ಸಂಶೋಧಕರು ಭಾರತದಲ್ಲಿರುವ ಎರಡು ಬಾವಲಿ ಪ್ರಬೇಧಗಳಲ್ಲಿ ಕೊರೋನಾ ವೈರಸ್ ನ್ನು ಗುರುತಿಸಿದ್ದು, ಮುಂದಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಳನ್ನು ಹರಡುವ ಸಾಮರ್ಥ್ಯವಿರುವ ಹೊಸ ಪ್ರಬೇಧಗಳನ್ನು ತಿಳಿಯಲು ಬಾವಲಿಗಳ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


