ಮನಕಲುಕುವ ದೃಶ್ಯ: ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್, ತಂದೆಯನ್ನು ಹೊತ್ತು ಸಾಗಿದ ಮಗ, ವಿಡಿಯೋ!

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ವಿಸ್ತರಿಸಲಾಗಿದ್ದು ಕಠಿಣ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸಿಗದೆ ಮಗ ತಂದೆಯನ್ನು ಹೊತ್ತು ಸಾಗುತ್ತಿರುವ ದೃಶ್ಯ ಮನಕಲುಕುವಂತಿದೆ. 
ತಂದೆಯನ್ನು ಹೊತ್ತು ಸಾಗಿದ ಮಗ
ತಂದೆಯನ್ನು ಹೊತ್ತು ಸಾಗಿದ ಮಗ
Updated on: 

ಕೊಲ್ಲಂ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ವಿಸ್ತರಿಸಲಾಗಿದ್ದು ಕಠಿಣ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸಿಗದೆ ಮಗ ತಂದೆಯನ್ನು ಹೊತ್ತು ಸಾಗುತ್ತಿರುವ ದೃಶ್ಯ ಮನಕಲುಕುವಂತಿದೆ. 

ಈ ಘಟನೆ ಕೇರಳದಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ 89 ವರ್ಷದ ಜಾರ್ಚ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಅವರನ್ನು ಡಿಸ್ಚಾರ್ಚ್ ಮಾಡಲಾಗಿದ್ದು ತಂದೆಯನ್ನು ಮಗ ರಾಯ್ ಆಟೋರಿಕ್ಷಾದಲ್ಲಿ ಕರೆತರುತ್ತಿದ್ದರು. ಈ ವೇಳೆ ಪೊಲೀಸರು ಆಟೋವನ್ನು ತಡೆದಿದ್ದರಿಂದ ಮಗ ಅವರನ್ನು ಹೊತ್ತು ಮನೆಗೆ ಸಾಗಿದರು. 

ಇದನ್ನು ವ್ಯಕ್ತಿಯೊಬ್ಬರು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಾಕ ಜಾಲತಾಣಕ್ಕೆ ಅಪ್ಲೋಟ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟಿಗರು ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ. 

ಲಾಕ್ ಡೌನ್ ಹಿನ್ನೆಲೆಯಲ್ಲಿ ಸೂಕ್ತ ದಾಖಲೆಗಳಿಲ್ಲದ ವಾಹನಗಳನ್ನು ಪೊಲೀಸರು ತಡೆದು ವಶಕ್ಕೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ದಾಖಲೆ ಇಲ್ಲದ್ದರಿಂದ ಆಟೋರಿಕ್ಷಾವನ್ನು ಪೊಲೀಸರು ತಡೆದು ನಿಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com