ಕೊರೋನಾ ಸಂಕಷ್ಟದ ಸಮಯದಲ್ಲೂ ಭಾರತೀಯ ಯೋಧರ ಮೇಲೆ ಉಗ್ರರ ದಾಳಿ, 3 ಯೋಧರು ಹುತಾತ್ಮ!

ಕೊರೋನಾ ಸಂಕಷ್ಟದ ಸಮಯದಲ್ಲೂ ಉಗ್ರರು ಭಾರತದಲ್ಲಿ ವಿದ್ವಂಸಕ ಕೃತ್ಯ ಎಸಗಿದ್ದಾರೆ. ಸಿಆರ್ಪಿಎಫ್ ಯೋಧರಿದ್ದ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ
Updated on: 

ಶ್ರೀನಗರ: ಕೊರೋನಾ ಸಂಕಷ್ಟದ ಸಮಯದಲ್ಲೂ ಉಗ್ರರು ಭಾರತದಲ್ಲಿ ವಿದ್ವಂಸಕ ಕೃತ್ಯ ಎಸಗಿದ್ದಾರೆ. ಸಿಆರ್ಪಿಎಫ್ ಯೋಧರಿದ್ದ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ. 

ಉಗ್ರರ ತಂಡವೊಂದು ಜಮ್ಮು ಮತ್ತು ಕಾಶ್ಮೀರ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಬಳಿ ಸಿಆರ್ಪಿಎಫ್ ವಾಹನದ ಮೇಲೆ ಹಠಾತ್ತನೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. 

ಉಗ್ರರ ದಾಳಿ ನಡೆದ ಕೂಡಲೇ ಸ್ಥಳಕ್ಕೆ ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ರವಾನಿಸಲಾಗಿದೆ. ಇಬ್ಬರು ಅಥವಾ ಮೂವರು ಉಗ್ರರ ತಂಡ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದಿಬಂದಿದ್ದು ಉಗ್ರರ ವಿರುದ್ಧ ಭಾರತೀಯ ಯೋಧರು ಕಾರ್ಯಾಚರಣೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com