ಲಾಕ್ ಡೌನ್: ಉತ್ತರ ಪ್ರದೇಶದಲ್ಲಿ ಪಡಿತರ ಪಡೆಯಲು ಕ್ಯೂನಲ್ಲಿ ನಿಂತಿದ್ದ ಮಹಿಳೆ ಕುಸಿದು ಬಿದ್ದು ಸಾವು

ಲಾಕ್ ಡೌನ್ ವೇಳೆ ಉಚಿತ ಪಡಿತರ ಪಡೆಯಲು ಅಂಗಡಿಯೊಂದರ ಮುಂದೆ ಕ್ಯೂನಲ್ಲಿ ನಿಂತಿದ್ದ ಮಹಿಳೆಯೊಬ್ಬರು ತೀವ್ರ ಅನಾರೋಗ್ಯಕ್ಕೀಡಾಗಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬದೌನ್: ಲಾಕ್ ಡೌನ್ ವೇಳೆ ಉಚಿತ ಪಡಿತರ ಪಡೆಯಲು ಅಂಗಡಿಯೊಂದರ ಮುಂದೆ ಕ್ಯೂನಲ್ಲಿ ನಿಂತಿದ್ದ ಮಹಿಳೆಯೊಬ್ಬರು ತೀವ್ರ ಅನಾರೋಗ್ಯಕ್ಕೀಡಾಗಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಈ ಘಟನೆ ನಡೆದಿದ್ದು, ಪೊಲೀಸರು ಮಹಿಳೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಕ್ಕಿ ಪಡೆಯಲು ಪಡಿತರ ಅಂಗಡಿ ಮುಂದೆ ಕ್ಯೂ ನಿಂತಿದ್ದ ವೇಳೆ ಮಹಿಳೆ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎಂದು ನಮಗೆ ಮಾಹಿತಿ ಬಂತು. ಜಿಲ್ಲಾ ವಿತರಣಾ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿದ್ದೇವು. ಸಾವಿಗೆ ಕಾರಣ ಇನ್ನು ತಿಳಿದುಬಂದಿಲ್ಲ. ಆದರೆ ಹೃದಯಾಘಾತಿಂದ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ನಂತರ ಮಹಿಳೆ ಕುಟುಂಬಕ್ಕೆ ಸಹಾಯ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕುಮಾರ್ ಪ್ರಶಾಂತ್ ಅವರು ಹೇಳಿದ್ದಾರೆ.

ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ವಿತರಣಾ ಅಧಿಕಾರಿ ರಾಮೇಂದರ್ ಪ್ರತಾಪ್ ಸಿಂಗ್ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com