ದೇಶ

ಮೇ.03 ರಂದು ವಿಮಾನ, ರೈಲು ಸೇವೆ ಪ್ರಾರಂಭ ಬಹುತೇಕ ಅನುಮಾನ! 

ಕೊರೋನಾ ವೈರಸ್ ತಡೆಗಟ್ಟಲು ವಿಧಿಸಲಾಗಿರುವ 40 ದಿನಗಳ ಎರಡನೇ ಸುತ್ತಿನ ಲಾಕ್ ಡೌನ್ ಮೇ.03 ಕ್ಕೆ ಮುಕ್ತಾಯಗೊಳ್ಳಲಿದೆ. ಆದರೆ ರೈಲು ಹಾಗೂ ವಿಮಾನ ಸೇವೆಗಳು ಪ್ರಾರಂಭವಾಗುವುದು ಬಹುತೇಕ ಅನುಮಾನಗೊಂಡಿದೆ

ಮೇ.03 ರಂದು ವಿಮಾನ, ರೈಲು ಸೇವೆ ಪ್ರಾರಂಭ ಬಹುತೇಕ ಅನುಮಾನ! 
ರೈಲು ಸೇವೆ
Published On :

ನವದೆಹಲಿ: ಕೊರೋನಾ ವೈರಸ್ ತಡೆಗಟ್ಟಲು ವಿಧಿಸಲಾಗಿರುವ 40 ದಿನಗಳ ಎರಡನೇ ಸುತ್ತಿನ ಲಾಕ್ ಡೌನ್ ಮೇ.03 ಕ್ಕೆ ಮುಕ್ತಾಯಗೊಳ್ಳಲಿದೆ. ಆದರೆ ರೈಲು ಹಾಗೂ ವಿಮಾನ ಸೇವೆಗಳು ಪ್ರಾರಂಭವಾಗುವುದು ಬಹುತೇಕ ಅನುಮಾನಗೊಂಡಿದೆ. 

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿವಾಸದಲ್ಲಿ ನಡೆದ ಗ್ರೂಪ್ ಆಫ್ ಮಿನಿಸ್ಟರ್ಸ್ ನ ಸಭೆಯಲ್ಲಿ ಭಾಗವಹಿಸಿದವರು ಈ ಬಗ್ಗೆ ಮಾಹಿತಿ ನೀಡಿದ್ದು, ಮೇ.03 ರಂದು ಲಾಕ್ ಡೌನ್ ತೆರವುಗೊಂಡರೂ ರೈಲು ಹಾಗೂ ವಿಮಾನಗಳ ಸೇವೆಗಳು ಲಭ್ಯವಿರುವುದಿಲ್ಲ. ಮೇ. 15 ರಿಂದ  ರೈಲು, ವಿಮಾನ ಸೇವೆಗಳು ಪ್ರಾರಂಭವಾಗುವಂತೆ ಸಲಹೆ ನೀಡಲಾಗಿದೆ ಎಂದು ಹೆಸರನ್ನು ಪ್ರಕಟಿಸಲು ಇಚ್ಛಿಸದ ಸಚಿವರೊಬ್ಬರು ಮಾಹಿತಿ ನೀಡಿದ್ದಾರೆ. 

ಸಭೆಯಲ್ಲಿ ಟೆಕ್ಸ್ರ‍ೈಲ್ ಸಚಿವೆ ಸ್ಮೃತಿ ಇರಾನಿ, ವಿಮಾನಯಾನ ಸಚಿವ ಹರ್ದೀಪ್ ಪುರಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಈ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಪ್ರಧಾನಿ ನರೇಂದ್ರ ಮೋದಿಗೆ ಕಳಿಸಲಾಗುತ್ತದೆ. ಅಂತಿಮ ನಿರ್ಣಯವನ್ನು ಪ್ರಧಾನಿ ಮೋದಿ ಕೈಗೊಳ್ಳುತ್ತಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.