ದೇಶದ ಅಧಿಕಾರ ಶಕ್ತಿ ಕೇಂದ್ರಕ್ಕೆ ತಟ್ಟಿದ ಕೊರೋನಾ: ಲೋಕಸಭಾ ಸಚಿವಾಲಯ ಹೌಸ್ ಕೀಪಿಂಗ್ ಸಿಬ್ಬಂದಿಗೆ ಸೋಂಕು!

ಕೊರೋನಾ ವೈರಸ್ ಸೋಂಕು ದೇಶದ ಅಧಿಕಾರ ಶಕ್ತಿಕೇಂದ್ರ ಸಂಸತ್ತಿಗೂ ತಟ್ಟಿದೆ. ಲೋಕಸಭಾ ಸಚಿವಾಲಯದಲ್ಲಿ ಕೆಲಸ ಮಾಡುವ ಹೌಸ್ ಕೀಪಿಂಗ್ ಸಿಬ್ಬಂದಿಗೆ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೇಶದ ಅಧಿಕಾರ ಶಕ್ತಿ ಕೇಂದ್ರಕ್ಕೆ ತಟ್ಟಿದ ಕೊರೋನಾ: ಲೋಕಸಭಾ ಸಚಿವಾಲಯ ಹೌಸ್ ಕೀಪಿಂಗ್ ಸಿಬ್ಬಂದಿಗೆ ಸೋಂಕು!
Updated on

ನವದೆಹಲಿ: ಕೊರೋನಾ ವೈರಸ್ ಸೋಂಕು ದೇಶದ ಅಧಿಕಾರ ಶಕ್ತಿಕೇಂದ್ರ ಸಂಸತ್ತಿಗೂ ತಟ್ಟಿದೆ. ಲೋಕಸಭಾ ಸಚಿವಾಲಯದಲ್ಲಿ ಕೆಲಸ ಮಾಡುವ ಹೌಸ್ ಕೀಪಿಂಗ್ ಸಿಬ್ಬಂದಿಗೆ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಂಕಿತ ವ್ಯಕ್ತಿ ಕಳೆದ ಕೆಲ ದಿನಗಳಿಂದ ಜ್ವರ, ಶೀತ, ಕಫ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಕೆಲಸಕ್ಕೆ ಬಂದಿರಲಿಲ್ಲ. ಜ್ವರ ಕಡಿಮೆಯಾಗದಿದ್ದ ಕಾರಣ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿತು.

ಸೋಂಕಿತ ವ್ಯಕ್ತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ವಿಶೇಷ ಘಟಕದಲ್ಲಿ ದಾಖಲಾಗಿದ್ದಾರೆ. ಸಿಬ್ಬಂದಿಯ ಕುಟುಂಬದ 11 ಮಂದಿ ಸದಸ್ಯರ ರಕ್ತದ ಮಾದರಿಯನ್ನು ಕೊರೋನಾ ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬರಬೇಕಿದೆ.

ಸ್ಥಳೀಯ ನಗರ ಪಾಲಿಕೆ ಅಧಿಕಾರಿಗಳು ಕೇಂದ್ರ ದೆಹಲಿಯಲ್ಲಿರುವ ಸಿಬ್ಬಂದಿಯ ಮನೆಯನ್ನು ಸೀಲ್ ಡೌನ್ ಮಾಡಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com