ಕೊರೋನಾವೈರಸ್ ಸಾಂಕ್ರಾಮಿಕ ರೋಗದ ನಡುವೆಯೂ ರಜೆ ತೆಗೆದುಕೊಳ್ಳದ ಗರ್ಭಿಣಿ ಪೊಲೀಸ್ ಅಧಿಕಾರಿ!

ಮಾರಕ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ನಡುವೆಯೂ ಏಳು ತಿಂಗಳ ಗರ್ಭಿಣಿ ಪೊಲೀಸ್ ಅಧಿಕಾರಿಯೊಬ್ಬರು ರಜೆ ತೆಗೆದುಕೊಳ್ಳದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಪೊಲೀಸ್ ಅಧಿಕಾರಿ ಅಮೃತಾ ಸೋರಿ ಧ್ರುವ್
ಪೊಲೀಸ್ ಅಧಿಕಾರಿ ಅಮೃತಾ ಸೋರಿ ಧ್ರುವ್

ರಾಯಪುರ: ಮಾರಕ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ನಡುವೆಯೂ ಏಳು ತಿಂಗಳ ಗರ್ಭಿಣಿ ಪೊಲೀಸ್ ಅಧಿಕಾರಿಯೊಬ್ಬರು ರಜೆ ತೆಗೆದುಕೊಳ್ಳದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

2007 ರ ಬ್ಯಾಚ್‌ನ ರಾಜ್ಯ ಪೊಲೀಸ್ ಸೇವಾ ಅಧಿಕಾರಿ ಅಮೃತಾ ಸೋರಿ ಧ್ರುವ್ ರಾಯ್‌ಪುರದ ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ದಣಿವರಿಯದಂತೆ  ಕೆಲಸ ಮಾಡುತ್ತಿದ್ದಾರೆ. ಲಾಕ್ ಡೌನ್ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ. 

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಆರೋಗ್ಯ, ಪೊಲೀಸ್, ಜಿಲ್ಲಾ ಆಡಳಿತದ  ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವಾಗ ನಾನು ಏಕೆ ಈ ಸವಾಲನ್ನು ಎದುರಿಸಬಾರದೆಂದು ಮಹಿಳೆಯರ ಮೇಲಿನ ಅಪರಾಧಕ್ಕಾಗಿ ತನಿಖಾ ದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿರುವ ಅಮೃತಾ ಸೋರಿ ಧ್ರುವ್ ಹೇಳುತ್ತಾರೆ.

ತನ್ನ ದಿನನಿತ್ಯದ ಕಚೇರಿ ಕೆಲಸಗಳನ್ನು ಮುಗಿಸಿದ ನಂತರ ನಗರದ ಪ್ರಮುಖ ಕಡೆಗಳಲ್ಲಿ ಸುತ್ತಾಡಿ ಪ್ರತಿದಿನ ಪೊಲೀಸ್ ಸಿಬ್ಬಂದಿಯೊಂದಿಗೆ ಸಂವಹನ ನಡೆಸುತ್ತಾರೆ ಮತ್ತು ಜನರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದಾರೆಯೇ ಎಂಬುದರ ಮೇಲ್ವಿಚಾರಣೆ ನಡೆಸುತ್ತಾರೆ

ಈಗ ರಜೆ ತೆಗೆದುಕೊಳ್ಳುವ ಮನಸ್ಥಿತಿಯಿಲ್ಲ, ನಾನು ಸರಿಯಾಗಿದ್ದೇನೆ. ರಜೆಯ ಅಗತ್ಯವಿದ್ದಾಗ ರಜೆ ಪಡೆಯುತ್ತೇನೆ. ಹಿರಿಯ ಅಧಿಕಾರಿಗಳಿಂದ ಯಾವುದೇ ಹೆಚ್ಚುವರಿ ಕೆಲಸದ ಹೊರೆ ಅಥವಾ ಒತ್ತಡವಿಲ್ಲ ಎಂದು ಹೇಳುವ ಅಮೃತಾ ಸೋರಿ ಧ್ರುವ್, ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಜವಾಬ್ದಾರಿಗಳು ಸ್ವಲ್ಪ ಭಿನ್ನವಾಗಿವೆ ಎಂದು ಹೇಳಿದ್ದಾರೆ. 

ಸರ್ಕಾರ ನೀಡಿರುವ ಸಲಹೆ ಸೂಚನೆಗಳನ್ನು ಪಾಲಿಸುವಂತೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ನಿಯಮಗಳನ್ನು ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ಅಮೃತಾ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com