ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ 4ಜಿ ಅಂತರ್ಜಾಲ ಸೇವೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ಜಮ್ಮು ಕಾಶ್ಮೀರದಲ್ಲಿ 4 ಜಿ ಇಂಟರ್ನೆಟ್ ಸೇವೆ ಒದಗಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ಸೂಚಿಸಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ 4 ಜಿ ಇಂಟರ್ನೆಟ್ ಸೇವೆ ಒದಗಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ಸೂಚಿಸಿದೆ. 

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ, ಭಾನುವಾರದೊಳಗೆ ಪ್ರತಿಕ್ರಿಯೆ ಸಲ್ಲಿಸಿ. ಸೋಮವಾರ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶನೀಡಿದೆ. ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ , ಜಮ್ಮು ಕಾಶ್ಮೀರದ ಕೆಲ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆ ಒದಗಿಸಬಹುದು ಎಂದು ಹೇಳಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com