ದೇಶ

ಚೆನ್ನೈನಲ್ಲಿ ಮತ್ತೆ ನಾಲ್ವರು ಪತ್ರಕರ್ತರಿಗೆ ಕೊವಿಡ್-19 ಪಾಸಿಟಿವ್

ಚೆನ್ನೈನಲ್ಲಿ ಮತ್ತೆ ನಾಲ್ವರು ಪತ್ರಕರ್ತರಿಗೆ ಕೊವಿಡ್-19 ಪಾಸಿಟಿವ್
ಸಾಂದರ್ಭಿಕ ಚಿತ್ರ
Published On :

ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಬುಧವಾರ ಚೆನ್ನೈನಲ್ಲಿ ಮತ್ತೆ ನಾಲ್ವರು ಪತ್ರಕರ್ತರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಈ ನಾಲ್ವರು ಪತ್ರಕರ್ತರ ಪೈಕಿ ಮೂವರು ಒಂದು ತಮಿಳು ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಮತ್ತೊಂದು ಸುದ್ದಿ ವಾಹಿನಿಯ ಓರ್ವ ಪತ್ರಕರ್ತನಿಗೆ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ನಿನೆಯಷ್ಟೇ ಸುದ್ದಿ ವಾಹಿನಿಯೊಂದರ 26 ಸಿಬ್ಬಂದಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದಿತ್ತು. ಹೀಗಾಗಿ ನಗರದ ಹಲವು ಪತ್ರಕರ್ತರು ಸ್ವಯಂ ಪ್ರೇರಿತರಾಗಿ ಕೊವಿಡ್-19 ಪರೀಕ್ಷೆಗೆ ಒಳಗಾಗುತ್ತಿದ್ದಾರೆ.

ಕಳೆದ ಭಾನುವಾರ ರೊಯಪುರಂನ ಸುದ್ದಿ ವಾಹಿನಿಯ ಉಪ ಸಂಪಾದಕರಿಗೆ ಕೊರೋನಾ ಇರುವುದು ಪತ್ತೆಯಾಗಿತ್ತು. ನಂತರ ಚೆನ್ನೈ ಮಹಾನಗರ ಪಾಲಿಕೆ ಅವರ ಸಂಪರ್ಕಿತ ಕೊರೋನಾ ಶಂಕಿತ 94 ಮಂದಿಯ ರಕ್ತ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದರು. ಅವರಲ್ಲಿ 26 ಮಂದಿಗೆ, ಇಂದು ಮತ್ತೆ ನಾಲ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.