ಮುಂಬೈವೊಂದರಲ್ಲೇ 4,000ಕ್ಕೇರಿತ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಲೇ ಇದ್ದು, ವಾಣಿಜ್ಯ ನಗರಿ ಖ್ಯಾತಿ ಪಡೆದಿರುವ ಮುಂಬೈ ನಗರವೊದರಲ್ಲೇ ಸೋಂಕಿತರ ಸಂಖ್ಯೆ 4,000 ಸಾವಿರಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಗುರುವಾರ ಒಂದೇ ದಿನ 478 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಆ ರಾಜ್ಯದಲ್ಲಿ ವೈರಸ್ ಪೀಡಿತರ ಸಂಖ್ಯೆ 6,427ಕ್ಕೆ ಏರಿಕೆಯಾಗಿದೆ.
ಗಮನಾರ್ಹ ವಿಚಾರವೆಂದರೆ, ಮುಂಬೈವೊಂದರಲ್ಲಿಯೇ 4000 ಸೋಂಕಿತರು ಇದ್ದಾರೆ. ಮಹಾರಾಷ್ಟ್ರದಲ್ಲಿ ಒಂದೇ ದಿನ 14 ಮಂದಿ ಸಾವಿಗಾಡಿದ್ದು, ಒಟ್ಟು ಮೃತರ ಸಂಖ್ಯೆ 283ಕ್ಕೆ ಏರಿಕೆಯಾಗಿದೆ. ಈ ನಡುವೆ ಅತಿದೊಡ್ಡ ಸ್ಲಂ ಮುಂಬೈನ ಧಾರಾವಿಯಲ್ಲಿ ಸೋಂಕಿತರ ಸಂಖಅಯೆ 200ರ ಗಡಿ ದಾಟಿದೆ. ಗುರುವಾರ ಒಂದೇ ದಿನ ಈ ಪ್ರದೇಶದಲ್ಲಿ 25 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಮುಂಬೈನಲ್ಲಿ ಸೋಂಕಿಗೊಳಗಾಗಿರುವ 4,000 ಮಂದಿಯ ಪೈಕಿ 473 ಮಂದಿ ಗುಣಮುಖರಾಗುತ್ತಿದ್ದು, ಇದರಲ್ಲಿ 48 ಮಂದಿ ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದೀಗ ಮುಂಬೈ ನಗರದಲ್ಲಿ 3,593 ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರಂದು ಬಿಎಂಸಿ ಮಾಹಿತಿ ನೀಡಿದೆ.
ಏಪ್ರಿಲ್ 20 ಮತ್ತು 21 ರಂದು ಸುಮಾರು 297 ಮಂದಿ ರೋಗಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ. ಗುರುವಾರ ಈ ಕುರಿತ ವೈದ್ಯಕೀಯ ವರದಿಗಳು ಸಿಗಲಿವೆ. ಐಸೋಲೇಷನ್ ವಾರ್ಡ್ ನಲ್ಲಿರುವ ರೋಗಿಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿಸಿದೆ. ಇನ್ನು 92,112 ಮಂದಿಯನ್ನು ಈಗಾಗಲೇ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


