

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರು ಹಾಗೂ ಓರ್ವ ಸಹಚರನನ್ನು ಹತ್ಯೆ ಮಾಡಿದೆ.
ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಗೋರಿಪೋರಾ ಎಂಬ ಪ್ರದೇಶದಲ್ಲಿ ಸೇನಾಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರು ಹಾಗೂ ಓರ್ವ ಸಹಚರನನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಗೋರಿಪೋರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಸೇನಾಪಡೆಗಳು ಇಂದು ಬೆಳಗಿನ ಜಾವ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಮಾರ್ಪಡಿಸಿದ ಸೇನಾಪಡೆಗಳು ಇದೀಗ ಮೂವರನ್ನು ಹತ್ಯೆ ಮಾಡಿದೆ. ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಲಾಗುತ್ತಿದೆ.