ದೇಶ

ವಿಶ್ವದಲ್ಲಿ 2 ಲಕ್ಷ ಗಡಿ ದಾಟಿದ ಕೊರೋನಾ ಸಾವಿನ ಸಂಖ್ಯೆ, ದೆಹಲಿಯಲ್ಲಿ ಮೇ.3ರ ನಂತರವೂ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ

ವಿಶ್ವದಲ್ಲಿ 2 ಲಕ್ಷ ಗಡಿ ದಾಟಿದ ಕೊರೋನಾ ಸಾವಿನ ಸಂಖ್ಯೆ, ದೆಹಲಿಯಲ್ಲಿ ಮೇ.3ರ ನಂತರವೂ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,490 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 56 ಮಂದಿ ರೋಗಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟಾರೆ ಕೊರೋನಾ ಪೀಡಿತರ ಸಂಖ್ಯೆ 24 ಸಾವಿರದ 942ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿಅಂಶ ತಿಳಿಸಿದೆ.

ಒಟ್ಟಾರೆ ಕೊರೋನಾ ಸೋಂಕು ಕೇಸುಗಳಲ್ಲಿ 5,209 ಗುಣಮುಖ ಹೊಂದಿದ ಮತ್ತು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಪ್ರಕರಣಗಳು, ಒಂದು ವಲಸೆ ಹೋದ ಮತ್ತು 779 ರೋಗಿಗಳು ಮೃತಪಟ್ಟ ಪ್ರಕರಣಗಳಾಗಿವೆ.

ಇನ್ನು ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೇ ತಿಂಗಳ ಮಧ್ಯಭಾಗದವರೆಗೂ ಲಾಕ್ ಡೌನ್ ನ್ನು ವಿಸ್ತರಿಸಬೇಕೆಂದು ದೆಹಲಿ ಸರ್ಕಾರಕ್ಕೆ ಕೋವಿಡ್-19 ಸಮಿತಿಯ ಉನ್ನತ ಅಧಿಕಾರಿಯೊಬ್ಬರು ಸಲಹೆ ಮಾಡಿದ್ದಾರೆ.

ನಿನ್ನೆ ಹೇಳಿಕೆ ಬಿಡುಗಡೆ ಮಾಡಿದ್ದ ಕೇಂದ್ರ ಸರ್ಕಾರ ಕೋವಿಡ್-19 ಪರಿಸ್ಥಿತಿ ಪ್ರಮುಖ ಮತ್ತು ಹೊಸದಾಗಿ ಹುಟ್ಟಿಕೊಂಡಿರುವ ಹಾಟ್ ಸ್ಪಾಟ್ ಗಳಾದ ಅಹಮದಾಬಾದ್, ಸೂರತ್, ಹೈದರಾಬಾದ್ ಮತ್ತು ಚೆನ್ನೈಗಳಲ್ಲಿ ಅಧಿಕವಾಗಿದೆ. ಈ ನಗರಗಳಲ್ಲಿ ಪರಿಸ್ಥಿತಿಯನ್ನು ನಿಗಾವಹಿಸಲು ನಾಲ್ಕು ಅಂತರ ಸಚಿವಾಲಯ ಕೇಂದ್ರ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದೆ.

ಜಾಗತಿಕ ಮಟ್ಟದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2 ಲಕ್ಷ ಗಡಿ ದಾಟಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.