ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಹಾರಾಷ್ಟ್ರ: ಮತ್ತೆ 729 ಹೊಸ ಪಾಸಿಟಿವ್ ಪ್ರಕರಣ, 9 ಸಾವಿರ ಗಡಿ ದಾಟಿದ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ

ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಮತ್ತೆ 729 ಹೊಸ ಪಾಸಿಟಿವ್ ಪ್ರಕರಣಗಳು ದೃಢವಾಗಿದೆ. ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 9318ಕ್ಕೆ ಏರಿಕೆಯಾಗಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಮತ್ತೆ 729 ಹೊಸ ಪಾಸಿಟಿವ್ ಪ್ರಕರಣಗಳು ದೃಢವಾಗಿದೆ. ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 9318ಕ್ಕೆ ಏರಿಕೆಯಾಗಿದೆ.

ಇನ್ನು ಇಂದೂ ಕೂಡ ಮಹಾರಾಷ್ಟ್ರದಲ್ಲಿ 31 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 400ರ ಗಡಿ ದಾಟಿದೆ. ಅಂತೆಯೇ ಇಂದು 106 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ  ಸಚಿವಾಲಯ ಮಾಹಿತಿ ನೀಡಿದೆ.

ಮಹಾರಾಷ್ಟ್ರದ ಜಿಲ್ಲೆಗಳ ಪೈಕಿ ವಾಣಿಜ್ಯ ರಾಜಧಾನಿ ಮುಂಬೈ ಮಹಾನಗರಿಯಲ್ಲೇ ಸೋಂಕಿತರ ಸಂಖ್ಯೆ ಹೆಚ್ಚಿದ್ದು, ಥಾಣೆ ಮತ್ತು ಮುಂಬೈ ಭಾಗದಲ್ಲಿ ಸೋಂಕಿತರ ಸಂಖ್ಯೆ 7223ಕ್ಕೆ ಏರಿಕೆಯಾಗಿದೆ. ಪುಣೆಯಲ್ಲಿ ಸೋಂಕಿತರ ಸಂಖ್ಯೆ 1288ಕ್ಕೆ ಏರಿಕೆಯಾಗಿದ್ದು, ನಾಸಿಕ್ ನಲ್ಲಿ 313ಕ್ಕೆ  ಏರಿಕೆಯಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com