ದೇಶ

ದೇಶದಲ್ಲಿ ಕೊರೋನಾ ಅಬ್ಬರ: 1,074 ಮಂದಿ ಸಾವು, ಸೋಂಕಿತರ ಸಂಖ್ಯೆ 33,000ಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ಅಬ್ಬರ: 1,074 ಮಂದಿ ಸಾವು, ಸೋಂಕಿತರ ಸಂಖ್ಯೆ 33,000ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ; ದೇಶದಲ್ಲಿ ಕೊರೋನಾ ಅಬ್ಬರ ಏರುತ್ತಲೇ ಇದ್ದು, ಇವರೆಗೂ ಮಹಾಮಾರಿ ವೈರಸ್ 1,074 ಮಂದಿಯನ್ನು ಬಲಿಪಡೆದುಕೊಂಡಿದೆ, ಅಲ್ಲದೆ, 33,000 ಸಾವಿರಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. 

ಕಳೆದ 24 ಗಂಟೆಗಳಲ್ಲಿ 67 ಮಂದಿ ಸಾವನ್ನಪ್ಪಿದ್ದು, 1,718 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 33,050ಕ್ಕೆ ಏರಿಕೆಯಾಗಿದ್ದು, 1,074 ಮಂದಿ ಬಲಿಯಾಗಿದ್ದಾರೆ. 

ಈ ನಡುವೆ ಸೋಂಕಿತರ ಜೊತೆ ಜೊತೆಗೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗಿದ್ದು, 30 ಸಾವಿರ ಸೋಂಕಿತರ ಪೈಕಿ ವಿವಿಧ ರಾಜ್ಯಗಳಲ್ಲಿ 8,325 ಮಂದಿ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ಹಿಂದೆ ಹೇಳಿಕೆ ಬಿಡುಗಡೆ ಮಾಡಿದ್ದ ಕೇಂದ್ರ ಗೃಹ ಸಚಿವಾಲಯ, 2ನೇ ಹಂತದ ಲಾಕ್'ಡೌನ್ ಮೇ.3ರಂದು ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಮೇ.4ರಿಂದ ಹೊಸ ಮಾರ್ಗಸೂಚಿಗಳು ಬಿಡುಗಡೆಯಾಗಲಿವೆ. ಅದರಲ್ಲಿ ಹಲವು ಜಿಲ್ಲೆಗಳಲ್ಲಿ ಗಣನೀಯ ಪ್ರಮಾಣದಲ್ಲಿ ಲಾಕ್'ಡೌನ್ ಸಡಿಲಗೊಳಿಸಲಾಗುತ್ತದೆ. ಈ ಕುರಿತು ಶೀಘ್ರದಲ್ಲಿಯೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.