ಪ್ರತಿ ಗಂಟೆಗೆ 30 ಸಾವಿರ ಸೀಸೆ ಕೊರೋನಾ ಲಸಿಕೆ ಉತ್ಪಾದಿಸುತ್ತೇವೆ: ಸೀರಮ್ ಸಿಇಓ ಪೂನಾವಾಲಾ

ಮಹಾಮಾರಿ ಕೊರೋನಾಗೆ ಲಸಿಕೆ ಕಂಡು ಹಿಡಿಯುವ ನಿಟ್ಟಿನಲ್ಲಿ ಜಗತ್ತಿನಾ ಹಲವು ಫಾರ್ಮಾ ಸಂಸ್ಥೆಗಳು ಲಸಿಕೆ ಕಂಡು ಹಿಡಿಯುವಲ್ಲಿ ನಿರತವಾಗಿವೆ. ಇದೇ ವೇಳೆ ಆಕ್ಸ್ ಫರ್ಡ್ ಮತ್ತು ಅಸ್ಟ್ರಾಜೆನೆಕಾ ಲಸಿಕೆ ಕಂಡು ಹಿಡಿಯುವಲ್ಲಿ ಒಂದು ಹೆಜ್ಜೆ ಮುಂದಿದೆ. 
ಕೋವಿಡ್ ಶಿಲ್ಡ್ ಲಸಿಕೆ
ಕೋವಿಡ್ ಶಿಲ್ಡ್ ಲಸಿಕೆ
Updated on

ಪುಣೆ: ಮಹಾಮಾರಿ ಕೊರೋನಾಗೆ ಲಸಿಕೆ ಕಂಡು ಹಿಡಿಯುವ ನಿಟ್ಟಿನಲ್ಲಿ ಜಗತ್ತಿನಾ ಹಲವು ಫಾರ್ಮಾ ಸಂಸ್ಥೆಗಳು ಲಸಿಕೆ ಕಂಡು ಹಿಡಿಯುವಲ್ಲಿ ನಿರತವಾಗಿವೆ. ಇದೇ ವೇಳೆ ಆಕ್ಸ್ ಫರ್ಡ್ ಮತ್ತು ಅಸ್ಟ್ರಾಜೆನೆಕಾ ಲಸಿಕೆ ಕಂಡು ಹಿಡಿಯುವಲ್ಲಿ ಒಂದು ಹೆಜ್ಜೆ ಮುಂದಿದೆ. 

ಆಕ್ಸ್ ಫರ್ಡ್ ಮತ್ತು ಅಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿ ಪಡಿಸಿದ ಕೋವಿಡ್ ಶೀಲ್ಡ್ ಹೆಸರಿನ ಲಸಿಕೆ ಮೊದಲ ಹಂತ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾಗಿದೆ. 

ಇನ್ನು ಭಾರತದಲ್ಲಿ ಸೀರಮ್ ಸಂಸ್ಧೆ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಜತೆಗೂಡಿ ಕೋವಿಡ್ ವೈರಸ್ ನಿಯಂತ್ರಣದ ಲಸಿಕೆ ತಯಾರಿಕೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಸ್ಧೆಯ ಸಿಇಓ ಅದರ್ ಪೂನಾವಾಲಾ ಲಸಿಕೆ ತಯಾರಿಸುವ ಬಗ್ಗೆ ಮಾತನಾಡಿದ್ದಾರೆ. 

2021ರ ಕೊನೆಯಲ್ಲಿ ಲಸಿಕೆಯನ್ನು ನಾವು ಘೋಷಣೆ ಮಾಡಬಹುದು. ಇದಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಲಸಿಕೆ ತಯಾರಿಕೆಗೆ 200 ದಶಲಕ್ಷ ಡಾಲರ್ ಹಣವನ್ನು ಹೂಡಿಕೆ ಮಾಡಿದ್ದೇವೆ. ನಮ್ಮ ಬಳಿ ಲಸಿಕೆ ತಯಾರಿಕೆಗೆ 6 ಯಂತ್ರಗಳಿವೆ. ಇವು ಪ್ರತಿ ನಿಮಿಷಕ್ಕೆ 500ರಂತೆ ಗಂಟೆಗೆ 30 ಸಾವಿರ ಸೀಸೆಯಲ್ಲಿ ಲಸಿಕೆಯನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com