ಗೃಹ ಸಚಿವ ಅಮಿತ್ ಶಾ ಏಮ್ಸ್ ಬಿಟ್ಟು, ಖಾಸಗಿ ಆಸ್ಪತ್ರೆಗೇಕೆ ದಾಖಲಾದರು?: ಶಶಿ ತರೂರ್

ಕೊರೋನಾ ಸೋಂಕಿಗೀಡಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ಕಾರಿ ಆಸ್ಪತ್ರೆಯನ್ನು ಬಿಟ್ಟು ಖಾಸಗಿ ಆಸ್ಪತ್ರೆಗೇಕೆ ದಾಖಲಾದರು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಸೋಮವಾರ ಪ್ರಶ್ನಿಸಿದ್ದಾರೆ.
ಶಶಿ ತರೂರ್
ಶಶಿ ತರೂರ್

ನವದೆಹಲಿ: ಕೊರೋನಾ ಸೋಂಕಿಗೀಡಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ಕಾರಿ ಆಸ್ಪತ್ರೆಯನ್ನು ಬಿಟ್ಟು ಖಾಸಗಿ ಆಸ್ಪತ್ರೆಗೇಕೆ ದಾಖಲಾದರು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಸೋಮವಾರ ಪ್ರಶ್ನಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನಮ್ಮ ಗೃಹ ಸಚಿವರು ಅನಾರೋಗ್ಯಕ್ಕೀಡಾದಾಗ ಏಮ್ಸ್ ಆಸ್ಪತ್ರೆಯನ್ನು ಬಿಟ್ಟು ನೆರೆ ರಾಜ್ಯದ ಖಾಸಗಿ ಆಸ್ಪತ್ರೆಯನ್ನೇಕೆ ಆಯ್ಕೆ ಮಾಡಿಕೊಂಡರು ಎಂಬುದು ಆಶ್ಚರ್ಯ ತರಿಸಿದೆ. ಸಾರ್ವಜನಿಕ ಸಂಸ್ಥೆಗಳ ಮೇಲೆ ಜನರಿಗೆ ವಿಶ್ವಾಸ ಬರುವಂತೆ ಮಾಡಲು ನಾಯಕರ ಪ್ರೋತ್ಸಾಹ ಅಗತ್ಯವಿದೆ ಎಂದು ಹೇಳಿದ್ದಾರೆ. 

ನಿನ್ನೆಯಷ್ಟೇ ಗೃಹ ಸಚಿವ ಅಮಿತ್ ಶಾ ಅವರು ತಮಗೆ ಕೊರೋನಾ ಪಾಸಿಟಿವ್ ಬಂದಿರುವ ವಿಚಾರವನ್ನು ಬಹಿರಂಗಪಡಿಸಿದ್ದರು. 

ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಪರೀಕ್ಷೆ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದರು. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ತಮ್ಮ ಸಂಪರ್ಕಕ್ಕೆ ಬಂದವರು ಕೂಡ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಮಿತ್ ಶಾ ಅವರು ತಿಳಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com