ಸಂವಿಧಾನ ಬದ್ಧವಾಗಿ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಶಕ್ತಿ ಭಾರತೀಯರಿಗಿದೆ: ಯೋಗಿ ಆದಿತ್ಯನಾಥ್

ಎಂತಹುದೇ ಕ್ಲಿಷ್ಟಕರ ಸಮಸ್ಯೆಗಳನ್ನು ಸಂವಿಧಾನ ಬದ್ಧವಾಗಿ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಶಕ್ತಿ ಭಾರತೀಯರಿಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.
ಯೋಗಿ ಆದಿತ್ಯಾನಾಥ್
ಯೋಗಿ ಆದಿತ್ಯಾನಾಥ್
Updated on

ಅಯೋಧ್ಯೆ: ಎಂತಹುದೇ ಕ್ಲಿಷ್ಟಕರ ಸಮಸ್ಯೆಗಳನ್ನು ಸಂವಿಧಾನ ಬದ್ಧವಾಗಿ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಶಕ್ತಿ ಭಾರತೀಯರಿಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.

ಇಂದು ಆಯೋಧ್ಯೆಯಲ್ಲಿ ನಡೆದ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಬಳಿಕ ನೆರೆದಿದ್ದ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯಾನಾಥ್ ಅವರು, '130 ಕೋಟಿ ಭಾರತೀಯರು ಮತ್ತು ಭಾರತದ ಬಗ್ಗೆ ಗೌರವವಿರುವ ಕೋಟ್ಯಂತರ ಜನರ ಭಾವನೆಗಳಿಗೆ ಗೌರವ ಕೊಟ್ಟ ಐತಿಹಾಸಿಕ ದಿನ ಇದು. ರಾಮ ಮಂದಿರಕ್ಕಾಗಿ ನೂರಾರು ಸಂತರು ಬಲಿದಾನ ಮಾಡಿದ್ದರು. ಮಂದಿರ ನಿರ್ಮಾಣದ ಆಶಯವನ್ನು ಜೀವಂತ ಇರಿಸಿಕೊಳ್ಳುವ ಪ್ರಕ್ರಿಯೆ ಸದಾ ಚಾಲ್ತಿಯಲ್ಲಿತ್ತು. ಇದೀಗ ಹಿಂಸಾಚಾರಕ್ಕೆ ಅವಕಾಶವಿಲ್ಲದೆ ಈ ಆಶಯ ಶಾಂತಿಯುತವಾಗಿ ಈಡೇರಿದೆ. ಇದಕ್ಕಾಗಿ ಪ್ರಧಾನಿ ಮೋದಿ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಹೇಳಿದರು.

'ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತದ ಪ್ರಜಾಪ್ರಭುತ್ವದ ಶಕ್ತಿ, ಮೌಲ್ಯಗಳು  ಮತ್ತು ನ್ಯಾಯಾಂಗ ವ್ಯವಸ್ಥೆಯ ಶಕ್ತಿ ಇಡೀ ವಿಶ್ವಕ್ಕೆ ಪರಿಚಯವಾಗಿದೆ. ಎಂತಹುದೇ ಕ್ಲಿಷ್ಟಕರ ಸಮಸ್ಯೆಗಳನ್ನು ಸಂವಿಧಾನ ಬದ್ಧವಾಗಿ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಶಕ್ತಿ ಭಾರತೀಯರಿಗಿದೆ ಎಂಬುದನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ.  ನಮಗೆ ಇದು ಅತ್ಯಂತ ಭಾವನಾತ್ಮಕ, ಮಹತ್ವಪೂರ್ಣ ದಿನ. ಭಗವಾನ್ ರಾಮಮಂದಿರವು ದೇಶದ ಕೀರ್ತಿ ಕಳಶದ ರೂಪದಲ್ಲಿ ಇಲ್ಲಿ ಅರಳಿ ನಿಲ್ಲಲಿದೆ.

'ಇದು ಅವಧಪುರಿ (ಅಯೋಧ್ಯೆ). ದೀಪಾವಳಿಯನ್ನು ಅಯೋಧ್ಯೆಯೊಂದಿಗೆ ಜೋಡಿಸಿ ದೀಪೋತ್ಸವ ಆಚರಿಸಿದ್ದೆವು. ನಮ್ಮ ಸಂಭ್ರಮ ಹೆಚ್ಚಿಸುವ ಕೆಲಸ ಇಂದು ಆಗಿದೆ. ರಾಮ ಮಂದಿರದ ಭೂಮಿಪೂಜೆ ಇಂದು ನಡೆದಿದೆ. ಅವಧಪುರಿಯನ್ನು ವಿಶ್ವದ ಸಂಪದ್ಭರಿತ ನಗರವಾಗಿಸುವ ಸಂಕಲ್ಪ ನಾವು ಮಾಡಿದ್ದೇವೆ. ರಾಮಾಯಣ ಪರ್ಯಟನೆ, ಸ್ವದೇಶ ದರ್ಶನದ ಯೋಜನೆಗಳಡಿ ಇಲ್ಲಿ ಸಾಕಷ್ಟು ಕೆಲಸಗಳು ಆಗಿವೆ. ದೇಶದ ವಿವಿಧೆಡೆಗಳಲ್ಲಿರುವ ಕೋಟ್ಯಂತರ ರಾಮಭಕ್ತರು ಈ ಕಾರ್ಯಕ್ರಮವನ್ನು ಶ್ರದ್ಧೆಯಿಂದ ನೋಡುತ್ತಿದ್ದಾರೆ. ಅವರೆಲ್ಲರನ್ನೂ ನಮಿಸುತ್ತೇನೆ ಎಂದು ಯೋಗಿ ಆದಿತ್ಯನಾಥ್ ಹೇಳಿದರು.

ಇನ್ನು ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸದ ಅಧ್ಯಕ್ಷ ಗೋಪಾಲದಾಸ್‌ಜಿ ಮಹಾರಾಜ್, ವಿವಿಧ ಪಂಥ ಮತ್ತು ಸಂಪ್ರದಾಯಗಳ ಸನ್ಯಾಸಿಗಳು ಭಾಗಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com