ರಾಮ ಮಂದಿರ ನಿರ್ಮಾಣ: ಆಂತರಿಕ ವ್ಯವಹಾರದಲ್ಲಿ ಮೂಗು ತೂರಿಸದಂತೆ ಪಾಕ್‌ಗೆ ಭಾರತ ಎಚ್ಚರಿಕೆ!

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಸಮಾರಂಭದ ಕುರಿತು ಪಾಕಿಸ್ತಾನದ ಟೀಕೆಗೆ ಭಾರತ ತಿರುಗೇಟು ನೀಡಿದ್ದು, ದೇಶದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಎಚ್ಚರಿಸಿದೆ.
ಮಂದಿರ ಶಿಲಾನ್ಯಾಸದ ಚಿತ್ರ
ಮಂದಿರ ಶಿಲಾನ್ಯಾಸದ ಚಿತ್ರ

ನವದೆಹಲಿ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಸಮಾರಂಭದ ಕುರಿತು ಪಾಕಿಸ್ತಾನದ ಟೀಕೆಗೆ ಭಾರತ ತಿರುಗೇಟು ನೀಡಿದ್ದು, ದೇಶದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಎಚ್ಚರಿಸಿದೆ.

ರಾಮ ದೇಗುಲ ನಿರ್ಮಾಣದ ಕುರಿತು ಪಾಕಿಸ್ತಾನದ ಪತ್ರಿಕಾ ಹೇಳಿಕೆಗೆ ಸಂಬಂಧಿಸಿ ಮಾಧ್ಯಮ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, “ಭಾರತದ ಆಂತರಿಕ ವಿಷಯದ ಬಗ್ಗೆ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನದ ಪತ್ರಿಕಾ ಹೇಳಿಕೆಯನ್ನು ಗಮನಿಸಲಾಗಿದೆ.  ಪಾಕಿಸ್ತಾನವು ಭಾರತದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದರಿಂದ ಹಾಗೂ ಕೋಮು ಪ್ರಚೋದನೆ ನೀಡುವ ಕೆಲಸದಿಂದ ದೂರವಿರಬೇಕು ಎಂದಿದ್ದಾರೆ.

"ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಹಾಗೂ ತನ್ನ ದೇಶದ ಅಲ್ಪಸಂಖ್ಯಾತರ ಧಾರ್ಮಿಕ ಹಕ್ಕುಗಳನ್ನು ನಿರಾಕರಿಸುವ ರಾಷ್ಟ್ರದ ಈ ನಡೆ ಅಚ್ಚರಿಯಲ್ಲವಾದರೂ, ರಾಮ ದೇಗುಲ ನಿರ್ಮಾಣದ ಕುರಿತು ನೀಡಿರುವ ಹೇಳಿಕೆಗಳು ವಿಷಾದನೀಯ” ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com