ಕೊರೋನಾ ವೈರಸ್ ಸೋಂಕು: ದೇಶಾದ್ಯಂತ ಒಂದೇ ದಿನ 61,537 ಹೊಸ ಪ್ರಕರಣ ಪತ್ತೆ!

ಮಾರಕ ಕೊರೋನಾ ವೈರಸ್ ಆರ್ಭಟ ಭಾರತದಲ್ಲಿ ಮತ್ತಷ್ಟು ಜೊರಾಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 61,537 ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ಆರ್ಭಟ ಭಾರತದಲ್ಲಿ ಮತ್ತಷ್ಟು ಜೊರಾಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 61,537 ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ.

ದೇಶದಲ್ಲಿ ನಿನ್ನೆ ಒಂದೇ ದಿನ 61,537 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 20,88,612ಕ್ಕೆ ಏರಿಕೆಯಾಗಿದೆ. 

ಈ ಪೈಕಿ 14,27,006 ಸೋಂಕಿತರು ಗುಣಮುಖರಾಗಿದ್ದು, ನಿನ್ನೆ ಒಂದೇ ದಿನ 933 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ 42,518 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಪ್ರಸ್ತುತ ದೇಶದಲ್ಲಿ 6,19,088 ಸಕ್ರಿಯ ಪ್ರಕರಣಗಳಿವೆ. ಅಂತೆಯೇ ದೇಶದಲ್ಲಿ ಗುಣಮುಖರಾದವರ ಪ್ರಮಾಣ ಕೂಡ ಏರಿಕೆಯಾಗಿದ್ದು, ಪ್ರಸ್ತುತ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.68.32ಕ್ಕೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com