ಅಮಿತ್‌ ಶಾಗೆ ಕೋವಿಡ್‌-19 ನೆಗೆಟಿವ್‌; ಮನೆಯಲ್ಲಿಯೇ ಪ್ರತ್ಯೇಕ ವಾಸ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಶುಕ್ರವಾರ ನಡೆಸಿದ ಕೋವಿಡ್‌ ತಪಾಸಣೆಯ ವರದಿ ನೆಗೆಟೀವ್ ಬಂದಿದೆ. ಈ ಹಿನ್ನೆಲೆಯಲ್ಲಿ, ಕೆಲ ದಿನಗಳ ಕಾಲ ಅವರು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಲಿದ್ದಾರೆ. 
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ
Updated on: 

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಶುಕ್ರವಾರ ನಡೆಸಿದ ಕೋವಿಡ್‌ ತಪಾಸಣೆಯ ವರದಿ ನೆಗೆಟೀವ್ ಬಂದಿದೆ. ಈ ಹಿನ್ನೆಲೆಯಲ್ಲಿ, ಕೆಲ ದಿನಗಳ ಕಾಲ ಅವರು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಲಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, "ಇಂದು ನನ್ನ ಕೊರೋನಾ ತಪಾಸಣಾ ವರದಿ ನೆಗೆಟಿವ್ ಬಂದಿದೆ. ದೇವರಿಗೆ ನಾನು ಧನ್ಯವಾದ ಹೇಳುತ್ತೇನೆ ಮತ್ತು ನನ್ನನ್ನು ಮತ್ತು ನನ್ನ ಕುಟುಂಬದವರನ್ನು ಆಶಿರ್ವದಿಸಿದ ಎಲ್ಲರಿಗೂ ನನ್ನ ಹೃದಯ ತುಂಬಿದ
 ಕೃತಜ್ಞತೆಗಳು" ಎಂದಿದ್ದಾರೆ.

ವೈದ್ಯರ ಸಲಹೆ ಮೇರೆಗೆ ನಾನು ಕೆಲ ದಿನಗಳ ಕಾಲ ಮನೆಯಲ್ಲಿಯೇ ಪ್ರತ್ಯೇಕವಾಗಿರಲಿದ್ದೇನೆ ಎಂದು ಹೇಳಿದ್ದಾರೆ.ಜೊತೆಗೆ, ಎಲ್ಲಾ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಕೂಡ ಶಾ ಧನ್ಯವಾದ ಹೇಳಿದ್ದಾರೆ. 

ಶಾ ಅವರು ಆ.3ರಂದು ಸೋಂಕಿನ ಲಘು ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ  ಗುರುಗ್ರಾಮದ ಮೇದಾಂತಾ ಆಸ್ಪತ್ರೆಗೆ ದಾಖಲಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com