ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧಕೋಟಿ ಬಹುಮಾನ ನೀಡುತ್ತೇನೆಂದು ಹೇಳಿದ್ದ ಉತ್ತರಪ್ರದೇಶದ ವ್ಯಕ್ತಿ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ತಲೆ ತಂದವರಿಗೆ ರೂ.51 ಲಕ್ಷ ಬಹುಮಾನ ಘೋಷಣೆ ಮಾಡಿದ್ದ ಇಲ್ಲಿನ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೋಮು ಸೌಹಾರ್ದತೆಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೀರುತ್ ಗ್ರಾಮೀಣ ಪ್ರದೇಶದ ಎಸ್'ಪಿ ಅವಿನಾಶ್ ಪಾಂಡೆಯವರು ತಿಳಿಸಿದ್ದಾರೆ.
ಉತ್ತರಪ್ರದೇಶ ಮುಸ್ಲಿಂ ನಾಯಕ ಶಜೇಬ್ ರಿಜ್ವಿಯವರು ಬೆಂಗಳೂರು ಗಲಭೆ ಸಂಬಂಧ ಹೇಳಿಕೆ ನೀಡಿ, ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ನವೀನ್ ತಲೆ ತಂದವರಿಗೆ ಬಹುಮಾನ ನೀಡುತ್ತೇನೆಂದು ಘೋಷಣೆ ಮಾಡಿದ್ದರು.
Advertisement