ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ: ಸೇನಾ ಆಸ್ಪತ್ರೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ಚೇತರಿಕೆ ಕಂಡುಬಂದಿಲ್ಲ ಎಂದು ದೆಹಲಿಯ ಸೇನಾ ರೆಫರಲ್‌ ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ.
ಪ್ರಣಬ್ ಮುಖರ್ಜಿ
ಪ್ರಣಬ್ ಮುಖರ್ಜಿ
Updated on: 

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ಚೇತರಿಕೆ ಕಂಡುಬಂದಿಲ್ಲ ಎಂದು ದೆಹಲಿಯ ಸೇನಾ ರೆಫರಲ್‌ ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ.

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ಕೃತಕ  ಉಸಿರಾಟ ವ್ಯವಸ್ಥೆ (ವೆಂಟಿಲೇಟರ್‌) ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕಳೆದ ಆಗಸ್ಚ್ 10ರಂದು ಪ್ರಣಬ್ ಮುಖರ್ಜಿ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿತ್ತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com