ರೇವ್ ಪಾರ್ಟಿ: 9 ಲಕ್ಷ ರೂ ಮೌಲ್ಯದ ಡ್ರಗ್ರ್, 23 ಮಂದಿಯನ್ನು ಬಂಧಿಸಿದ ಪೊಲೀಸರು!

ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ಮತ್ತು ವಿದೇಶಿಗರು ಸೇರಿ 23 ಮಂದಿಯನ್ನು ಬಂಧಿಸಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪಣಜಿ: ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ಮತ್ತು ವಿದೇಶಿಗರು ಸೇರಿ 23 ಮಂದಿಯನ್ನು ಬಂಧಿಸಲಾಗಿದೆ. 

ಉತ್ತರ ಗೋವಾ ಜಿಲ್ಲೆಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಬಳಸಲಾಗುತ್ತಿದೆ ಎಂಬ ಶಂಕೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. 

ಕೋವಿಡ್ 19 ಭೀತಿ ನಡುವೆಯೂ ಅಂಜುನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಗೇಟರ್ ಗ್ರಾಮದ ವಿಲ್ಲಾದಲ್ಲಿ ಈ ಘಟನೆ ನಡೆದಿದೆ. 

ರಷ್ಯಾದ ಮೂಲದ ಇಬ್ಬರು ಮಹಿಳೆಯರು ಮತ್ತು ಜೆಕ್ ಗಣರಾಜ್ಯದ ಓರ್ವನನ್ನು ಬಂಧಿಸಲಾಗಿದೆ. ಇನ್ನು ಪಾರ್ಟಿ ಆಯೋಜಕನನ್ನು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಲ್ಟೆನ್ಸಸ್(ಎನ್ ಡಿಪಿಎಸ್) ಕಾಯ್ದೆಯಡಿ ಬಂಧಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com