ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಅರೆಸೇನಾ ಪಡೆಯ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಓರ್ವ ಅದಿಕಾರಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ರಾತ್ರಿ 8-45ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ನಿಹಮಾದಲ್ಲಿನ ಕ್ಯಾಂಪ್ ಹೊರಗಡೆ ಸಿಆರ್ ಪಿಎಫ್ 18ನೇ ಬೆಟಾಲಿಯನ್ ನ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಗುಂಡಿನ ದಾಳಿ ವೇಳೆ ಸಿಆರ್ ಪಿಎಫ್ ನ ಸಹಾಯಕ ಸಬ್ ಇನ್ಸ್ ಪೆಕ್ಟರ್ ಒಬ್ಬರಿಗೆ ಗಾಯವಾಗಿದೆ. ಮುಂದಿನ ಮಾಹಿತಿ ತಿಳಿದುಬರಬೇಕಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement