ಭಾರತದಲ್ಲಿ ಒಂದೇ ದಿನ ದಾಖಲೆಯ 8,99,864 ಮಂದಿಗೆ ಕೊರೋನಾ ಪರೀಕ್ಷೆ: ಐಸಿಎಂಆರ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ ದಾಖಲೆಯ 8,99,864 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ತಿಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ ದಾಖಲೆಯ 8,99,864 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ತಿಳಿಸಿದೆ. 

ಐಸಿಎಂಆರ್ ಮಾಹಿತಿ ನೀಡಿರುವ ಪ್ರಕಾರ ಈ ವರೆಗೂ ಅಂದರೆ ಆಗಸ್ಟ್ 17ರವರೆಗೂ 3,09,41,264 ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 8,99,864 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 55,079 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇನ್ನು ನಿನ್ನೆ ಒಂದೇ ದಿನ 876 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ ಇದರೊಂದಿಗೆ ದೇಶದಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 51,797ಕ್ಕೆ ತಲುಪಿದೆ. 

ಒಂದೇ ದಿನ 55,079 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿಕೆಯಾಗಿದೆ. 27,02,743 ಮಂದಿ ಸೋಂಕಿತರ ಪೈಕಿ 19,77,780 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನೂ 6,73,166 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com