ರಾಜ್ಯಗಳಿಗೆ ಅಗತ್ಯ ಪ್ರಮಾಣದ ಯೂರಿಯಾ ಪೂರೈಕೆ- ಡಿ. ವಿ.ಸದಾನಂದಗೌಡ 

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರ ಕೃಷಿ ಚಟುವಟಿಕೆಗೆ ತೊಡಕಾಗದಂತೆ ಅಗತ್ಯ ಪ್ರಮಾಣದ ರಸಗೊಬ್ಬರ ಲಭ್ಯತೆಯ ಖಾತ್ರಿಪಡಿಸಲಾಗಿದ್ದು, ಪೂರೈಕೆಯ ಬಗ್ಗೆ ನಿಗಾ ಇಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ  ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
ಡಿ.ವಿ. ಸದಾನಂದಗೌಡ
ಡಿ.ವಿ. ಸದಾನಂದಗೌಡ

ನವದೆಹಲಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರ ಕೃಷಿ ಚಟುವಟಿಕೆಗೆ ತೊಡಕಾಗದಂತೆ ಅಗತ್ಯ ಪ್ರಮಾಣದ ರಸಗೊಬ್ಬರ ಲಭ್ಯತೆಯ ಖಾತ್ರಿಪಡಿಸಲಾಗಿದ್ದು, ಪೂರೈಕೆಯ ಬಗ್ಗೆ ನಿಗಾ ಇಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ  ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ರಸಗೊಬ್ಬರ ಇಲಾಖೆ ರಾಜ್ಯಗಳಿಗೆ ಪೂರೈಸಲಾಗುತ್ತಿರುವ ಯೂರಿಯಾ ಬಗ್ಗೆ ಸೂಕ್ತ ನಿಗಾ ಇಟ್ಟಿದ್ದು, ಸಾಪ್ತಾಹಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಸಹ ನಿಗಾ ವಹಿಸಿದೆ, ಇದರ ಜೊತೆಗೆ ಅಧಿಕಾರಿಗಳೊಂದಿಗೆ ನಡೆಸಲಾಗುತ್ತಿರುವ ದೈನಂದಿನ ಸಂವಾದದ ಮೂಲಕ ಪ್ರತಿಯೊಂದು ಸಮಸ್ಯೆಯನ್ನೂ ಉನ್ನತ ಆದ್ಯತೆಯ ಮೂಲಕ ಪರಿಹರಿಸಲಾಗುತ್ತಿದೆ ಎಂದರು.

ಆಪ್ತವಾಗಿ ನಿಗಾ ಇಡಲಾಗಿರುವ ಸಮ್ಮತ ಯೋಜನೆಯ ರೀತಿಯ ಪೂರೈಕೆಯನ್ನು ಖಾತ್ರಿಪಡಿಸಲು ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com