ಶಿಕ್ಷಣ ಸಚಿವಾಲಯವಾದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ: ರಾಷ್ಟ್ರಪತಿ ಕೋವಿಂದ್ ಅಂಕಿತ

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಸಮ್ಮತಿ ನೀಡಿದ್ದಾರೆ. 
ರಾಷ್ಟ್ರಪತಿ ರಾಮನಾಥ್ ಕೋವಿಂದ್
ರಾಷ್ಟ್ರಪತಿ ರಾಮನಾಥ್ ಕೋವಿಂದ್
Updated on

ನವದೆಹಲಿ: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಸಮ್ಮತಿ ನೀಡಿದ್ದಾರೆ. 

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಕರಡಿನಲ್ಲಿ ಪ್ರಸ್ತಾಪಿಸಲಾಗಿದ್ದ ಪ್ರಮುಶ ಶಿಫಾರಸ್ಸುಗಳಲ್ಲಿ ಸಚಿವಾಲಯದ ಹೆಸರು ಮರುನಾಮಕರಣವೂ ಸೇರಿತ್ತು. ಪ್ರಸ್ತಾಪನನೆಗೆ ಕೇಂದ್ರ ಸಚಿವ ಸಂಪುಟ ಕಳೆದ ತಿಂಗಳು ಅನುಮೋದನೆ ನೀಡಿತ್ತು. 

ಸೋಮವಾರ ರಾತ್ರಿ ಪ್ರಕಟಿಸಲಾಗಿರುವ ಗೆಜೆಟೆಡ್ ನೋಟಿಫಿಕೇಷನ್ ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹೆಸರನ್ನು ಶಿಕ್ಷಣ ಸಚಿವಾಲಯವಾಗಿ ಬದಲಿಸಲು ರಾಷ್ಟ್ರಪತಿ ಒಪ್ಪಿಗೆ ನೀಡಿರುವುದಾಗಿ ತಿಳಿಸಲಾಗಿದೆ. 

1985ರಲ್ಲಿ ಅಂದಿನ ಪ್ರಧಾನಿ ರಾಜೀವ್‌ ಗಾಂಧಿ ಅವರ ಆಡಳಿತಾವಧಿಯಲ್ಲಿ 'ಶಿಕ್ಷಣ ಸಚಿವಾಲಯವು' ಮಾನವ ಸಂಪನ್ಮೂಲ ಸಚಿವಾಲಯವಾಗಿ ಬದಲಾಯಿತು. 1986ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪರಿಚಯಿಸಲಾಯಿತು ಹಾಗೂ 1992ರಲ್ಲಿ ಅದಕ್ಕೆ ತಿದ್ದುಪತಿ ತರಲಾಯಿತು.ರಾಜೀವ್‌ ಗಾಂಧಿ ಅವರ ಸಚಿವ ಸಂಪುಟದಲ್ಲಿ ಪಿ.ವಿ.ನರಸಿಂಹ ರಾವ್‌ ಅವರು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಮೊದಲ ಸಚಿವರಾಗಿದ್ದರು.

ಇಸ್ರೊ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್‌ ಅವರ ನೇತೃತ್ವದಲ್ಲಿ ಸಮಿತಿಯು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವ ಕಾರ್ಯ ನಡೆಸಿತು. ಆ ಸಮಿತಿಯು ಸಚಿವಾಲಯದ ಹೆಸರು ಬದಲಿಸಲು ಶಿಫಾರಸ್ಸು ಮಾಡಿತು.  ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಅಧ್ಯಕ್ಷರಾದ ರಾಮ್‌ ಬಹದೂರ್‌ ರಾಯ್‌ 2018ರಲ್ಲಿ ಅದೇ ವಿಚಾರವನ್ನು ಮತ್ತೊಮ್ಮೆ ಪ್ರಸ್ತಾಪಿಸಿದ್ದು ಚರ್ಚೆಯಾಗಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com