ಆಗ್ರಾ-ಲಖನೌ ಎಕ್ಸ್'ಪ್ರೆಸ್'ವೇನಲ್ಲಿ ಮಗುಚಿ ಬಿದ್ದ ಬಸ್: 16 ಪ್ರಯಾಣಿಕರಿಗೆ ಗಾಯ

ಉತ್ತರಪ್ರದೇ್ಶದಲ್ಲಿ ಆಗ್ರಾ-ಲಖನೌ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ 16 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಇಟಾವಾಹ್: ಉತ್ತರಪ್ರದೇ್ಶದಲ್ಲಿ ಆಗ್ರಾ-ಲಖನೌ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ 16 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ. 

45 ಮಂದಿಯಿಂದ ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಬಿಹಾರದ ಮಧುಬಾನಿಗೆ ಬಸ್ ತೆರಳುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಬಸ್ ಮಗುಚಿ ಬಿದ್ದಿದ್ದು, ಪರಿಣಾಮ ಬಸ್ ನಲ್ಲಿದ್ದ 45 ಮಂದಿ ಪ್ರಯಾಣಿಕರ ಪೈಕಿ 16 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕಾಗಮಿಸಿದ ಪೊಲೀಸು ಗಾಯಾಳುಗಳನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com