ಭಾರತದಲ್ಲಿ ಕೊರೋನಾ ಸ್ಫೋಟ: 24 ಗಂಟೆಗಳಲ್ಲಿ 69,652 ಕೇಸ್ ಪತ್ತೆ, 28.3 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನೇನು ಇಳಿಮುಖವಾಗುತ್ತಿದೆ ಎಂ ಆಶಾಭಾವನೆಗಳ ಬೆನ್ನಲ್ಲೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗುರುವಾರ ಭಾರೀ ಪ್ರಮಾಣದ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 69,652 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28,36,926ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಇನ್ನೇನು ಇಳಿಮುಖವಾಗುತ್ತಿದೆ ಎಂ ಆಶಾಭಾವನೆಗಳ ಬೆನ್ನಲ್ಲೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗುರುವಾರ ಭಾರೀ ಪ್ರಮಾಣದ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 69,652 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28,36,926ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಇನ್ನು ಒಂದೇ ದಿನ 977 ಮಂದಿ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ 53,866ಕ್ಕೆ ಏರಿಕೆಯಾಗಿದೆ. 

28,36,926 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಈ ವರೆಗೂ 20,96,665 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇನ್ನೂ 6,86,395 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com