ಪ್ರಣಬ್ ಮುಖರ್ಜಿ
ಪ್ರಣಬ್ ಮುಖರ್ಜಿ

ದೀರ್ಘ ಕೋಮಾ ಸ್ಥಿತಿಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೀರ್ಘ ಕೋಮಾ ಸ್ಥಿತಿಗೆ ಜಾರಿದ್ದಾರೆ ಎಂದು ಆರ್ ಅಂಡ್ ಆರ್ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ನವದೆಹಲಿ: ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೀರ್ಘ ಕೋಮಾ ಸ್ಥಿತಿಗೆ ಜಾರಿದ್ದಾರೆ ಎಂದು ಆರ್ ಅಂಡ್ ಆರ್ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ಪ್ರಣಬ್ ಮುಖರ್ಜಿ ಅವರ ಆರೋಗ್ಯಗದ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಆಸ್ಪತ್ರೆ ಆಡಳಿತ ಮಂಡಳಿ, 'ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ ಸುಧಾರಣೆಯಾಗಿಲ್ಲ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದೆ.

ಪ್ರಣಬ್ ಮುಖರ್ಜಿ ಅವರು ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ. ಸಹಜ ಉಸಿರಾಟ ವ್ಯವಸ್ಥೆಯ ಸುಧಾರಣೆಗಾಗಿ ಚಿಕಿತ್ಸೆ ನಡೆಯುತ್ತಿದೆ. ಶಸ್ತ್ರಚಿಕಿತ್ಸೆಯ ನಂತರ ಪ್ರಣವ್ ಅವರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರ ಆರೋಗ್ಯದ ಮೇಲೆ ತಜ್ಞ ವೈದ್ಯರ ತಂಡ ತೀವ್ರ ನಿಗಾ ಇರಿಸಿದೆ ಎಂದು ಆಸ್ಪತ್ರೆ  ಹೇಳಿದೆ.

ಪ್ರಣಬ್ ಮುಖರ್ಜಿ 2012ರಿಂದ 2017ರ ವರೆಗೆ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಮಿದುಳಿನಲ್ಲಿ ಹೆಪ್ಪುಗಟ್ಟಿದ ರಕ್ತವನ್ನು ತೆಗೆಯುವ ಶಸ್ತ್ರಚಿಕಿತ್ಸೆಗಾಗಿ ಪ್ರಣವ್ ಮುಖರ್ಜಿ ಅವರು ಕಳದೆ 10 ರಂದು ದೆಹಲಿಯ ಸೇನಾ ರೆಫೆರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com