ಬಿಹಾರ ವಿಧಾನಸಭೆಗೆ ಬಿಜೆಪಿ, ಜೆಡಿಯು ಮತ್ತು ಎಲ್ ಜೆಪಿ ಒಟ್ಟಾಗಿ ಚುನಾವಣೆಯನ್ನು ಎದುರಿಸುತ್ತಿವೆ: ಜೆ ಪಿ ನಡ್ಡಾ

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಸಂಯುಕ್ತ ಜನತಾ ದಳ, ಲೋಕ ಜನಶಕ್ತಿ ಪಕ್ಷ ಮತ್ತು ಬಿಜೆಪಿ ಒಟ್ಟಾಗಿ ಚುನಾವಣೆಯನ್ನು ಎದುರಿಸಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ತಿಳಿಸಿದ್ದಾರೆ.
ಜೆ ಪಿ ನಡ್ಡಾ
ಜೆ ಪಿ ನಡ್ಡಾ

ನವದೆಹಲಿ: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಸಂಯುಕ್ತ ಜನತಾ ದಳ, ಲೋಕ ಜನಶಕ್ತಿ ಪಕ್ಷ ಮತ್ತು ಬಿಜೆಪಿ ಒಟ್ಟಾಗಿ ಚುನಾವಣೆಯನ್ನು ಎದುರಿಸಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ತಿಳಿಸಿದ್ದಾರೆ.

ಈ ಬಾರಿ ಕೂಡ ಮೂರೂ ಪಕ್ಷಗಳ ಮೈತ್ರಿಕೂಟ ಗೆಲುವು ಸಾಧಿಸಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲಿದೆ, ಜನರಿಗೆ ಬಿಜೆಪಿ ಭರವಸೆಯ ಬೆಳಕಾಗಿ ದೇಶದೆಲ್ಲೆಡೆ ಕಾಣುತ್ತಿದೆ ಎಂದು ಜೆ ಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಆಡಳಿತಾರೂಢ ಎನ್ ಡಿಎ ಬಿಹಾರದಲ್ಲಿ ಮೈತ್ರಿಗೆ ಬದ್ಧವಾಗಿದ್ದು, ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ನಿರೂಪಿಸಲಾಗುವುದು ಎಂದಿದ್ದಾರೆ.

ಇತ್ತೀಚೆಗೆ ಜೆಡಿಯು ಮತ್ತು ಎಲ್ ಜೆಪಿ ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಕಂಡುಬಂದು ಸುದ್ದಿಯಾಗಿತ್ತು. ಈ ಸಂದರ್ಭದಲ್ಲಿ ನಡ್ಡಾ ಅವರ ಹೇಳಿಕೆ ಮಹತ್ವವಾಗಿದೆ.

ಬಿಹಾರ ಸರ್ಕಾರ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಮತ್ತು ಪ್ರವಾಹವನ್ನು ಸರಿಯಾಗಿ ನಿರ್ವಹಿಸುತ್ತಿದೆ ಎಂದು ನಡ್ಡಾ ಶ್ಲಾಘಿಸಿದ್ದಾರೆ. ಬಿಹಾರ ವಿಧಾನಸಭೆಗೆ ಅಕ್ಟೋಬರ್-ನವೆಂಬರ್ ನಲ್ಲಿ ಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com