ಕೋವಿಡ್-19 ಲಸಿಕೆ ಕುರಿತ ಮಾಹಿತಿಗಾಗಿ ಪೋರ್ಟಲ್ ಅಭಿವೃದ್ಧಿಪಡಿಸುತ್ತಿರುವ ಐಸಿಎಂಆರ್

 ದೇಶ ಹಾಗೂ ವಿದೇಶದಲ್ಲಿ ಕೋವಿಡ್-19 ಲಸಿಕೆ ಅಭಿವೃದ್ಧಿ ಕುರಿತ ಮಾಹಿತಿ ನೀಡಲು ಪೋರ್ಟಲ್ ವೊಂದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಅಭಿವೃದ್ಧಿಪಡಿಸುತ್ತಿದ್ದು, ಇದರ ಕಾರ್ಯ ಪ್ರಗತಿಯಲ್ಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶ ಹಾಗೂ ವಿದೇಶದಲ್ಲಿ ಕೋವಿಡ್-19 ಲಸಿಕೆ ಅಭಿವೃದ್ಧಿ ಕುರಿತ ಮಾಹಿತಿ ನೀಡಲು ಪೋರ್ಟಲ್ ವೊಂದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಅಭಿವೃದ್ಧಿಪಡಿಸುತ್ತಿದ್ದು, ಇದರ ಕಾರ್ಯ ಪ್ರಗತಿಯಲ್ಲಿದೆ. ಇಂಗ್ಲೀಷ್ ಜೊತೆಗೆ ಇತರ ಪ್ರಾದೇಶಿಕ ಭಾಷೆಗಳಲ್ಲೂ ಲಸಿಕೆ ಅಭಿವೃದ್ಧಿಯಲ್ಲಿ ಆಗುತ್ತಿರುವ ಮಾಹಿತಿಯನ್ನು ಪೋರ್ಟಲ್ ನಲ್ಲಿ ನೀಡಲಾಗುತ್ತದೆ.

ಕೋವಿಡ್-19 ಲಸಿಕೆ ಅಭಿವೃದ್ಧಿ ಸಂಬಂಧಿತ ಮಾಹಿತಿಯನ್ನು ನೀಡುವ ಉದ್ದೇಶದಿಂದ ಪೋರ್ಟಲ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಐಸಿಎಂಆರ್ ಸಾಂಕ್ರಾಮಿಕ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥ ಸಮಿರನ್ ಪಾಂಡ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಾದೇಶಿಕ ಭಾಷೆಗಳ ಮೂಲಕ ಪ್ರತಿಯೊಬ್ಬ ನಾಗರಿಕರಿಗೂ ಮಾಹಿತಿಯನ್ನು ನೀಡಲಾಗುವುದು, ಮುಂದಿನ ವಾರದಿಂದ ಈ ಪೋರ್ಟಲ್ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ.

ಮೊದಲ ಹಂತದಲ್ಲಿ ದೇಶ, ವಿದೇಶಗಳಲ್ಲಿನ ಕೋವಿಡ್ ಲಸಿಕೆಗೆ ಸಂಬಂಧಿತ ಮಾಹಿತಿ ನೀಡಲಾಗುವುದು, ಇತರ ಕಾಯಿಲೆಗಳನ್ನು ತಡೆಗಟ್ಟುವ ಇತರ ಲಸಿಕೆಗಳ ಬಗ್ಗೆ ಮಾಹಿತಿಯನ್ನು ಪೋರ್ಟಲ್ ನಲ್ಲಿ ಹಾಕಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com