ದೇಶ

ಮಹಾರಾಷ್ಟ್ರ: ಮಹದ್ ನಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ, ಅವಶೇಷಗಳಡಿ 70 ಮಂದಿ ಸಿಲುಕಿರುವ ಶಂಕೆ

ಮಹಾರಾಷ್ಟ್ರ: ಮಹದ್ ನಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ, ಅವಶೇಷಗಳಡಿ 70 ಮಂದಿ ಸಿಲುಕಿರುವ ಶಂಕೆ
ಕುಸಿದುಬಿದ್ದ ಕಟ್ಟಡದ ಅವಶೇಷ
Published On :

ರಾಯಗಡ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಕಟ್ಟಡದ ಅವೇಶಗಳಡಿ ಸುಮಾರು 70ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಬಹುಮಹಡಿ ಕಟ್ಟಡದ ಮೂರು ಮಹಡಿಗಳು ಕುಸಿದುಬಿದ್ದ ನಂತರ ಇದುವರೆಗೆ 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮಹಾರಾಷ್ಟ್ರ ಸಚಿವ ಅದಿತಿ ಎಸ್ ತತ್ಕರೆ ಅವರು ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಬಹುಮಹಡಿ ಕಟ್ಟಡದೊಳಗೆ ಸುಮಾರು 200 ಮಂದಿ ಸಿಲುಕಿರುವ ಸಾಧ್ಯತೆ ಇದೆ ತತ್ಕರೆ ಅವರು ತಿಳಿಸಿದ್ದಾರೆ.

ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಅವರಿಗೆ ಸಣ್ಣಪುಟ್ಟ ಗಾಯಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಐದು ರಕ್ಷಣಾ ತಂಡಗಳಿದ್ದು, ಹೆಚ್ಚಿನ ರಕ್ಷಣಾ ತಂಡಗಳು ಬರುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ.

ಮಹದ್ ಕಜಲಪುರ್ ಪ್ರದೇಶದಲ್ಲಿರುವ ಈ ಬಹುಮಹಡಿ ಕಟ್ಟದಲ್ಲಿ 45 ಫ್ಲಾಟ್ ಗಳು ಇದ್ದು, ಸುಮಾರು 100 ಜನ ವಾಸವಾಗಿದ್ದರು. ಇಂದು ಸಂಜೆ 7 ಗಂಟೆಯ ಸುಮಾರಿಗೆ ಕಟ್ಟಡ ಕುಸಿದು ಬಿದ್ದಿದೆ ಎಂದು ರಾಯಗಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.