ಕೊವಿಡ್-19: ನೀಟ್, ಜೆಇಇ ಪರೀಕ್ಷೆ ಮುಂದೂಡುವಂತೆ ಕೇಂದ್ರಕ್ಕೆ ಒಡಿಶಾ ಸಿಎಂ ಮನವಿ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ನಲ್ಲಿ ನಿಗದಿಯಾಗಿರುವ ಜೆಇಇ ಮುಖ್ಯ ಪರೀಕ್ಷೆ ಮತ್ತು ತಾಂತ್ರಿಕ ಹಾಗೂ ವೈದ್ಯಕೀಯ ಕೋರ್ಸ್ ಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನವೀನ್ ಪಟ್ನಾಯಕ್
ನವೀನ್ ಪಟ್ನಾಯಕ್

ಭುವನೇಶ್ವರ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ನಲ್ಲಿ ನಿಗದಿಯಾಗಿರುವ ಜೆಇಇ ಮುಖ್ಯ ಪರೀಕ್ಷೆ ಮತ್ತು ತಾಂತ್ರಿಕ ಹಾಗೂ ವೈದ್ಯಕೀಯ ಕೋರ್ಸ್ ಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಪತ್ರ ಬರೆದಿರುವ ಒಡಿಶಾ ಸಿಎಂ, "ದೇಶದಲ್ಲಿ ಚಾಲ್ತಿಯಲ್ಲಿರುವ ಕೊವಿಡ್ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನೀಟ್ ಮತ್ತು ಜೆಇಇ ಪರೀಕ್ಷೆಗಳು ಮುಂದೂಡಿ. ಈ ಪರೀಕ್ಷೆಗಳಲ್ಲಿ ಹಾಜರಾಗಲು ವಿದ್ಯಾರ್ಥಿಗಳು ಇತರೆ ರಾಜ್ಯಗಳ ಪರೀಕ್ಷಾ ಕೇಂದ್ರಗಳಿಗೆ ತೆರಳುವುದು ಸುರಕ್ಷಿತವಲ್ಲ ಮತ್ತು ಇದು ಅಪಾಯಕಾರಿ ಎಂದು ನಾನು ಹೇಳಲು ಬಯಸುತ್ತೇನೆ" ಎಂದಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜೆಇಇ ಮುಖ್ಯ ಪರೀಕ್ಷೆಯನ್ನು ಸೆಪ್ಟೆಂಬರ್ 1 ರಿಂದ 6 ರವರೆಗೆ ಮತ್ತು ನೀಟ್ ಪರೀಕ್ಷೆಯನ್ನು ಸೆಪ್ಟೆಂಬರ್ 13 ರಂದು ನಡೆಸಲು ನಿರ್ಧರಿಸಿದ್ದು, ಒಡಿಶಾದ 50,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್‌ನಲ್ಲಿ ಮತ್ತು ಸುಮಾರು 40,000 ವಿದ್ಯಾರ್ಥಿಗಳು ಜೆಇಇ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಸಿಎಂ ವಿವರಿಸಿದ್ದಾರೆ.

ಆದಾಗ್ಯೂ, ಎನ್‌ಟಿಎ ಕೇವಲ ಏಳು ಪಟ್ಟಣಗಳಲ್ಲಿ ಮಾತ್ರ ಪರೀಕ್ಷಾ ಕೇಂದ್ರಗಳನ್ನು ತೆರೆದಿದೆ ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕ ಸಾರಿಗೆ ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಕೇಂದ್ರಗಳನ್ನು ತಲುಪಲು ಕಷ್ಟವಾಗುತ್ತದೆ. ಹೀಗಾಗಿ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ಒಡಿಶಾ ಸಿಎಂ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com