ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿರುವ ಅಣ್ಣಾಮಲೈ! ತಮಿಳುನಾಡು ಬಿಜೆಪಿಗೆ ಸೇರ್ಪಡೆ

ಕರ್ನಾಟಕದಲ್ಲಿ ಸಿಂಗಂ ಎಂದೇ ಖ್ಯಾತಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ .ಅಣ್ಣಾಮಲೈ  ಬಿಜೆಪಿ ಸೇರಲಿದ್ದಾರೆ.ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ
Updated on: 

ಚೆನ್ನೈ: ಕರ್ನಾಟಕದಲ್ಲಿ ಸಿಂಗಂ ಎಂದೇ ಖ್ಯಾತಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ .ಅಣ್ಣಾಮಲೈ  ಬಿಜೆಪಿ ಸೇರಲಿದ್ದಾರೆ.ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಕರ್ನಾಟಕದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಅಣ್ಣಾಮಲೈ, 2019ರಲ್ಲಿ ಸೇವೆಗೆ ರಾಜೀನಾಮೆ ಸಲ್ಲಿಸುವ ಮೂಲಕ ಜನರ ನಡುವೆ ಕೆಲಸದಲ್ಲಿ ನಿರತರಾಗಿದ್ದಾರೆ.

ಬಿಜೆಪಿ ರಾಷ್ಟ್ರೀಯತೆಯ ಪಕ್ಷವಾಗಿದ್ದು, ರಾಷ್ಟ್ರೀಯತೆಗೆ ಮೊದಲ ಆದ್ಯತೆ ನೀಡುತ್ತೇನೆ.ಬಿಜೆಪಿಯಿಂದ ತಮಿಳುನಾಡಿಗೆ ಹೊಸ ಮಾರ್ಗದರ್ಶನ ದೂರದೃಷ್ಟಿ ಸಿಗಲಿದೆ ಎಂಬುದಾಗಿ ಭಾವಿಸುವುದಾಗಿ ಅವರು ತಿಳಿಸಿದ್ದಾರೆ.

ಪೊಲೀಸ್ ಸೇವೆಗೆ ರಾಜೀನಾಮೆ ನೀಡಿದ ಬಳಿಕ ಅಣ್ಣಾಮಲೈ, ಕರೂರ್ ಮತ್ತು ಕೊಯಂಬತ್ತೂರಿನಲ್ಲಿ ಸಂಸ್ಥೆಯೊಂದರ ಮೂಲಕ ಕೃಷಿಕರೊಂದಿಗೆ ಕೆಲಸ ಮಾಡುತ್ತಿದ್ದಾರೆ. 

ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರುತ್ತಿದ್ದೇನೆ.ಸಾಮಾಜಿಕ ಬದಲಾವಣೆಗಿಂತ ರಾಜಕೀಯ ಬದಲಾವಣೆ ಪ್ರಮುಖವಾದದ್ದು ಅನ್ನಿಸುತ್ತಿದೆ.ಆದ್ದರಿಂದ ಬಿಜೆಪಿ ಸೇರುತ್ತಿರುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com