ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 1ರವರೆಗೆ ಸಂಸತ್ ಮುಂಗಾರು ಅಧಿವೇಶನ 

ಸೆಪ್ಟೆಂಬರ್ 14ರಿಂದ ಅಕ್ಟೋಬರ್ 1ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಸೆಪ್ಟೆಂಬರ್ 14ರಿಂದ ಅಕ್ಟೋಬರ್ 1ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ.

ಸಂಸದೀಯ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಸಭೆ ಎರಡುವಾರಗಳ ಅಧಿವೇಶನ ನಡೆಸಲು ದಿನಾಂಕ ನಿಗದಿಪಡಿಸಿದೆ. ಸೆಪ್ಟೆಂಬರ್ 14ರಿಂದ ಅಕ್ಟೋಬರ್ 1ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದ್ದು, ಅಧಿವೇಶನ ಆರಂಭವಾದ ಬಳಿಕ ಮಧ್ಯದಲ್ಲಿ ಯಾವುದೇ ರಜೆ ಇರುವುದಿಲ್ಲ, ಪ್ರತಿನಿತ್ಯ 4  ಗಂಟೆಗಳ ಕಾಲ ಅಧಿವೇಶನ ನಡೆಯಲಿದೆ. 

ಕೊರೊನಾ ಹಿನ್ನಲೆಯಲ್ಲಿ ಜನರ ಜೀವನ ಶೈಲಿಯೇ ಬದಲಾಗಿದೆ. ಜೊತೆಗೆ ಸರ್ಕಾರದ ಯಂತ್ರದ ಶೈಲಿ ಕೂಡ. ಇದೇ ರೀತಿ ಈಗ ಇದೇ ಮೊದಲ ಬಾರಿಗೆ ಸಂಸತ್ ಅಧಿವೇಶನವೂ ಭಿನ್ನವಾಗಿ ನಡೆಯಲಿದೆ. ಕೊರೊನಾ ಕಾರಣಕ್ಕೆ ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೇಗೆ ನಡೆಸಬೇಕೆಂಬ  ಗೊಂದಲ ಉಂಟಾಗಿತ್ತು.ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರಿಗೆ ಆಸನದ ವ್ಯವಸ್ಥೆಯೂ ಭಿನ್ನವಾಗಿರಲಿದೆ. 542 ಲೋಕಸಭಾ ಸದಸ್ಯರ ಪೈಕಿ ಕೆಲವರಿಗೆ ಲೋಕಸಭೆಯಲ್ಲಿ, ಕೆಲವರಿಗೆ ರಾಜ್ಯಸಭೆಯಲ್ಲಿ ಮತ್ತೆ ಕೆಲವರಿಗೆ ಸೆಂಟ್ರಲ್ ಹಾಲ್ ನಲ್ಲಿ ಆಸನದ  ವ್ಯವಸ್ಥೆ ಮಾಡಲಾಗುತ್ತದೆ.

ರಾಜ್ಯಸಭೆಯಲ್ಲಿ 7 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ.ಲೋಕಸಭೆಯಲ್ಲಿ 15 ಪತ್ರಕರ್ತರಿಗೆ ಅವಕಾಶ ನೀಡಲಾಗುವುದು ಎಂದೂ ಹೇಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com