ಮಹಾರಾಷ್ಟ್ರ ಕಟ್ಟಡ ಕುಸಿತ ಪ್ರಕರಣ: ಪ್ರಧಾನಿ ಮೋದಿ ತೀವ್ರ ಸಂತಾಪ

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ ಕಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತೀವ್ರ ಸಂತಾಪ ಸೂಚಿಸಿದ್ದಾರೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on: 

ನವದೆಹಲಿ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ ಕಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತೀವ್ರ ಸಂತಾಪ ಸೂಚಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕುಟುಂಬಸ್ಥರ ಕಳೆದುಕೊಂಡವರ ಕುರಿತು ತೀವ್ರ ಸಂತಾಪ ಸೂಚಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡಿರುವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
 
ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಟ್ಟಡದ ಅವಶೇಷಗಳಡಿ 70ಕ್ಕೂ ಹೆಚ್ಚು ಮಂದಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com